ಕೋಲಾರ:ಕರ್ನಾಟಕ ಭೂ ಸುಧಾರಣೆ ಕಾಯ್ದೆ ಸೇರಿದಂತೆ ಕೃಷಿ ಉತ್ಪನ ಮಾರುಕಟ್ಟೆ ತಿದ್ದುಪಡಿಗೆ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸುತ್ತಿರುವುದನ್ನು ಖಂಡಿಸಿ ಕೋಲಾರದಲ್ಲಿಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಭೂ ಸುಧಾರಣಾ ಕಾಯ್ದೆ ರೈತರಿಗೆ ಮಾರಕ; ಕೋಲಾರ ಜೆಡಿಎಸ್ ಆಕ್ರೋಶ - protest in Kolar
ರಾಜ್ಯ ಸರ್ಕಾರ ಕರ್ನಾಟಕ ಭೂ ಸುಧಾರಣೆ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯದ ರೈತರನ್ನು ಬೀದಿಪಾಲು ಮಾಡುತ್ತಿದೆ ಎಂದು ಕೋಲಾರ ಜೆಡಿಎಸ್ ಆರೋಪಿಸಿದೆ.
ಕೋಲಾರದ ತಾಲೂಕು ಕಚೇರಿ ಮುಂದೆ ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ಕ್ರಮವನ್ನು ತೀವ್ರವಾಗಿ ಖಂಡಿಸಿದರು. ರಾಜ್ಯ ಸರ್ಕಾರ ಕರ್ನಾಟಕ ಭೂ ಸುಧಾರಣೆ ಕಾಯ್ದೆಯನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಿ ರಾಜ್ಯದ ರೈತರನ್ನು ಬೀದಿಪಾಲು ಮಾಡುತ್ತಿದೆ ಎಂದು ಆರೋಪಿಸಿದರು.
ರೈತರಿಗೆ ಮಾರಕವಾಗಿರುವ ಭೂ ಸುಧಾರಣೆ ಕಾಯ್ದೆ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಕಾಯ್ದೆಗಳನ್ನು ಕೂಡಲೇ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.