ಕರ್ನಾಟಕ

karnataka

ETV Bharat / state

ಕೋಲಾರ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್ ಪ್ರತಿಭಟನೆ - ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

ಕಳೆದ ರಾತ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ ರಮೇಶ್ ಕುಮಾರ್ ಜೆಡಿಎಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪದ ಹಿನ್ನೆಲೆ ಶ್ರೀನಿವಾಸಪುರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ..

ರಮೇಶ್ ಕುಮಾರ್ ವಿರುದ್ಧ ಜೆಡಿಎಸ್ ಪ್ರತಿಭಟನೆ
ರಮೇಶ್ ಕುಮಾರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

By

Published : Jan 7, 2022, 5:47 PM IST

ಕೋಲಾರ : ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್, ಜೆಡಿಎಸ್ ಮುಖಂಡರೊಂದಿಗೆ ನಡೆದುಕೊಂಡಿರುವ ವರ್ತನೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಶ್ರೀನಿವಾಸಪುರ ಪಟ್ಟಣ ಬಂದ್ ಆಚರಣೆ ಮಾಡಿದರು.

ಕಾಂಗ್ರೆಸ್‌ ಶಾಸಕ ರಮೇಶ್ ಕುಮಾರ್ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿರುವುದು..

ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿಸಿರುವ ಮುಖಂಡರು, ಸರ್ಕಾರಿ ಬಸ್ ನಿಲ್ದಾಣದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ. ಕಳೆದ ರಾತ್ರಿ ಪೊಲೀಸ್ ಠಾಣೆಯಲ್ಲಿ ಶಾಸಕ ರಮೇಶ್ ಕುಮಾರ್ ಜೆಡಿಎಸ್ ಮುಖಂಡ ಹಾಗೂ ಮಾಜಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ತೂಪಲ್ಲಿ ನಾರಾಯಣಸ್ವಾಮಿ ಅವರನ್ನು ಅವಾಚ್ಯವಾಗಿ ನಿಂದಿಸಿದ ಆರೋಪದ ಹಿನ್ನೆಲೆ, ಶ್ರೀನಿವಾಸಪುರದಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಾಗಿದೆ.

ಶ್ರೀನಿವಾಸಪುರ ಪಟ್ಟಣದಲ್ಲಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಪ್ರತಿಭಟನಾನಿರತರನ್ನ ಮನವಿ ಮಾಡಿದರು ಪರಿಸ್ಥಿತಿ ಹತೋಟಿಗೆ ಬಂದಿಲ್ಲ. ಪರಿಣಾಮ ಪೊಲೀಸರು ಹಾಗೂ ಪ್ರತಿಭಟನಾನಿರತ ಜೆಡಿಎಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆಯಿತು.

ಪೊಲೀಸರೊಂದಿಗೆ ಪ್ರತಿಭಟನಾನಿರತರು ಕೆಲಕಾಲ ಜಟಾಪಟಿ ನಡೆಸಿದರು. ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಜಿ.ಕೆ.ವೆಂಕಟಶಿವಾರೆಡ್ಡಿ, ಮಾಜಿ ಪರಿಷತ್ ಸದಸ್ಯ ಚೌಡರೆಡ್ಡಿ ನೇತೃತ್ವದಲ್ಲಿ ಬೆಳಗಿನಿಂದಲೂ ಪ್ರತಿಭಟನೆ ಮಾಡಲಾಗುತ್ತಿದೆ. ಇನ್ನೂ ಎರಡು ಪ್ರಮುಖ ಪಕ್ಷಗಳ ಪ್ರತಿಭಟನೆಯಿಂದ ನಗರದಲ್ಲಿ ಪರಿಸ್ಥಿತಿ ಹತೋಟಿಗೆ ತರಲು ಪೊಲೀಸರು ಹರಸಾಹಸ ಪಡಬೇಕಾಯಿತು.

For All Latest Updates

TAGGED:

ABOUT THE AUTHOR

...view details