ಕರ್ನಾಟಕ

karnataka

ETV Bharat / state

ಕೋಲಾರದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ - ಕೋಲಾರ ಕನ್ನಡ ರಾಜ್ಯೋತ್ಸವ ಸುದ್ದಿ

ಗಡಿಜಿಲ್ಲೆ ಕೋಲಾರದಲ್ಲಿ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಚಾಲನೆ ನೀಡಿದರು.

ಕೋಲಾರದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

By

Published : Nov 1, 2019, 11:32 PM IST

ಕೋಲಾರ: ಜಿಲ್ಲೆಯಾದ್ಯಂತ 64ನೇ ಕನ್ನಡ ರಾಜ್ಯೋತ್ಸವವನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.

ಕೋಲಾರ ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾಡಳಿತದ ವತಿಯಿಂದ ನಡೆದ ರಾಜ್ಯೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ನಾಗೇಶ್ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆಗೈದು, ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಈ ವೇಳೆ ರಾಷ್ಟ್ರಧ್ವಜ ಹಾಗೂ ಕನ್ನಡ ದ್ವಜಾರೋಹಣ ನೆರವೇರಿಸಿದ ಬಳಿಕ ಸಚಿವರು ಸ್ತಬ್ಧಚಿತ್ರಗಳ ಮೆರವಣಿಗೆಗೆ ಚಾಲನೆ ನೀಡಿದರು. ಈ ವೇಳೆ ಕೋಲಾರ ಶಾಸಕ ಶ್ರೀನಿವಾಸಗೌಡ, ಜಿಲ್ಲಾಧಿಕಾರಿ ಜೆ.ಮಂಜುನಾಥ್, ರಕ್ಷಣಾಧಿಕಾರಿ ಕಾರ್ತಿಕ್ ರೆಡ್ಡಿ ಭಾಗಿಯಾಗಿದ್ದರು.

ಕೋಲಾರದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

ಟಿಪ್ಪು ವಿಚಾರದಲ್ಲಿ ನಾನು ತಟಸ್ಥ: ನಾಗೇಶ್​

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್, ನಾನು ಪಕ್ಷೇತರನಾಗಿ ಗೆದ್ದಿರುವುದು ನಿಜ. ಹಿಂದೆ ಟಿಪ್ಪು ನಡೆಸಿರುವ ಹೋರಾಟದ ಬಗ್ಗೆ ಇತಿಹಾಸ ಹೇಳುತ್ತದೆ. ಟಿಪ್ಪು ಬಗ್ಗೆ ನಮಗೂ ಹೆಮ್ಮೆ, ಆತ ಓರ್ವ ಜಾತ್ಯಾತೀತ ಹೋರಾಟಗಾರನಾಗಿದ್ದ. ಈ ವಿಚಾರದಲ್ಲಿ ನಾನು ಸಚಿವನಾಗಿರುವುದರಿಂದ ತಟಸ್ಥನಾಗಿಯೇ ಇರುತ್ತೇನೆ ಎಂದು ಹೇಳಿದರು.

ಇನ್ನು ಉಪ ಚುನಾವಣೆಯಲ್ಲಿ 15 ಸ್ಥಾನಗಳನ್ನ ಗೆಲ್ಲಲಿದ್ದೇವೆ. ಆ ಮೂಲಕ ರಾಜ್ಯ ಬಿಜೆಪಿ ಸರ್ಕಾರ 5 ವರ್ಷ ಸುಭದ್ರವಾಗಿರಲಿದೆ. ಅಲ್ಲದೆ ಜಿಲ್ಲೆಗೆ ಮೆಡಿಕಲ್ ಕಾಲೇಜು ಸೇರಿದಂತೆ ಸಾಕಷ್ಟು ಅಭಿವೃದ್ದಿ ಯೋಜನೆಗಳನ್ನ ಕೇಳಿದ್ದೇನೆ. ಇದರಿಂದ ಜಿಲ್ಲೆಯ ಜನರಿಗೆ ಅನುಕೂಲವಾಗಲಿದೆ ಎಂದರು.

ABOUT THE AUTHOR

...view details