ಕೋಲಾರ:ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಕೋಲಾರದಲ್ಲಿ ಕನ್ನಡ ಪರ ಸಂಘಟನೆಗಳು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ, ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ರು.
ಕೋಲಾರದಲ್ಲಿ ಕನ್ನಡ ಪರ ಸಂಘಟನೆಗಳಿಂದ ಸಾಂಕೇತಿಕ ಪ್ರತಿಭಟನೆ - ಕೋಲಾರ ಸುದ್ದಿ
ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಕೋಲಾರದಲ್ಲಿ ಕನ್ನಡ ಪರ ಸಂಘಟನೆಗಳ ಸದಸ್ಯರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.

ನಗರದ ಗಾಂಧಿವನದಲ್ಲಿ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಸಿಂಹಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿದ್ರು. ಸರೋಜಿನಿ ಮಹಿಷಿ ವರದಿ ಜಾರಿಗೆ ಎಲ್ಲಾ ಸಂಘಟನೆಗಳು ಬೆಂಬಲ ನೀಡಬೇಕಾಗಿತ್ತು. ಆದರೆ, ಕೆಲವರು ರಾಜಕೀಯ ಉದ್ದೇಶದಿಂದ ಬಂದ್ನಲ್ಲಿ ಭಾಗವಹಿಸದೇ ಇರುವುದು ಬೇಸರದ ಸಂಗತಿ. ಸರೋಜಿನಿ ಮಹಿಷಿ ವರದಿಯಿಂದ ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ಹೆಚ್ಚಿನ ಆದ್ಯತೆ ಸಿಗುತ್ತದೆ. ಆದರೆ, ರಾಜ್ಯ ಸರ್ಕಾರ ವರದಿಯನ್ನು ಅನುಷ್ಟಾನಗೊಳಿಸಲು ಮೀನಾಮೇಷ ಎಣಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ರು. ಉಳಿದಂತೆ ಮಾಲೂರಿನಲ್ಲಿ ಜೈ ಕರ್ನಾಟಕ ಕಾರ್ಯಕರ್ತರು ಮಾರಿಕಾಂಬ ವೃತ್ತದಲ್ಲಿ ರಸ್ತೆ ತಡೆ ನಡೆಸಿ, ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ರೂ ಬಿಟ್ಟರೆ ಜಿಲ್ಲೆಯಲ್ಲಿ ಬೇರೆಲ್ಲೂ ಬಂದ್ ಬಿಸಿ ತಟ್ಟಿಲ್ಲ.
ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಮುಂಜಾಗೃತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಡಿಸಲಾಗಿತ್ತು. ಶಾಲೆ ಕಾಲೇಜುಗಳು ಎಂದಿನಂತೆ ನಡೆದವು.