ಕರ್ನಾಟಕ

karnataka

ETV Bharat / state

ಕೋಲಾರ: ಎಂಇಎಸ್​ ಕಾರ್ಯಕರ್ತರ ಗಡಿಪಾರಿಗೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿಯಲ್ಲಿ ಕನ್ನಡಿಗರ ಮೇಲಿನ ಹಲ್ಲೆ ಹಾಗೂ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಅಡ್ಡಿಪಡಿಸಿದ ಎಂಇಎಸ್​ ಕಾರ್ಯಕರ್ತರ ವಿರುದ್ಧ ಕೋಲಾರದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಿ ಎಂಇಎಸ್​ ಪುಂಡರನ್ನು ಗಡಿಪಾರು ಮಾಡುವಂತೆ ಆಗ್ರಹಿಸಲಾಯಿತು.

By

Published : Aug 31, 2020, 4:55 PM IST

Karnataka rakshana vedike protest over Belagavi statue issue in kolar
ಎಂಇಎಸ್​ ಕಾರ್ಯಕರ್ತರ ಗಡಿಪಾರಿಗೆ ಆಗ್ರಹಿಸಿ ಕೋಲಾರದಲ್ಲಿ ಪ್ರತಿಭಟನೆ

ಕೋಲಾರ: ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ಎಂಇಎಸ್ ಪುಂಡರು ನಡೆಸಿದ ಹಲ್ಲೆ ಖಂಡಿಸಿ ಕೋಲಾರದಲ್ಲಿ ಪ್ರತಿಭಟನೆ ನಡೆಸಲಾಯಿತು. ಇಲ್ಲಿನ ಮೆಕ್ಕೆ ವೃತ್ತದ ಬಳಿ ಇರುವ ತಹಶೀಲ್ದಾರ್ ಕಛೇರಿ‌ ಎದುರು ಪ್ರತಿಭಟನೆ ನಡೆಸಿದ ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಎಂಇಎಸ್ ಹಾಗೂ ಮರಾಠಿ ಪುಂಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ

ಕನ್ನಡಿಗರ ಮೇಲೆ ಹಲ್ಲೆ ಮಾಡಿದ ಎಂಇಎಸ್ ಹಾಗೂ ಮರಾಠಿ ಪುಂಡರನ್ನು ಗಡಿಪಾರು ಮಾಡುವಂತೆ ಆಗ್ರಹಿಸಿದರು. ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ವಿನಾಕಾರಣ ಕ್ಯಾತೆ ತೆಗೆಯುತ್ತಿರುವ ಎಂಇಎಸ್ ಕಾರ್ಯಕರ್ತರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದರು.

ಇದಲ್ಲದೆ ಬೆಳಗಾವಿಯ ಸುವರ್ಣಸೌಧದ ಮುಂದೆ ಸುಮಾರು 51 ಅಡಿ ಎತ್ತರದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ನಿರ್ಮಾಣ ಮಾಡಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.

ABOUT THE AUTHOR

...view details