ಕರ್ನಾಟಕ

karnataka

ETV Bharat / state

ಭಾರೀ ಮಳೆಗೆ ಕೆರೆಯಂತಾದ ರೈಲ್ವೆ ಅಂಡರ್ ಪಾಸ್ : ವಾಹನ ಸವಾರರ ಪರದಾಟ - ಕೋಲಾರದ ಕೀಲುಕೋಟೆ ಬಳಿಯಿರುವ ರೈಲ್ವೆ ಅಂಡರ್ ಪಾಸ್

ಮಳೆಗಾಲದಲ್ಲಿ ಈ ರೈಲ್ವೆ ಅಂಡರ್ ಪಾಸ್ ಮೃತ್ಯುಕೂಪವಾಗಿ ಪರಿಣಮಿಸಿದೆ. ಸಂಬಂಧಪಟ್ಟ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದ್ರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿ ಕೊಡಬೇಕಾಗಿದೆ..

kolar
ಭಾರೀ ಮಳೆಗೆ ಕೆರೆಯಂತಾದ ರೈಲ್ವೆ ಅಂಡರ್ ಪಾಸ್

By

Published : Jul 2, 2021, 7:57 AM IST

ಕೋಲಾರ : ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ನಗರದ ಕೀಲುಕೋಟೆ ಬಳಿಯಿರುವ ರೈಲ್ವೆ ಅಂಡರ್ ಪಾಸ್ ತುಂಬಾ ನೀರು ತುಂಬಿಕೊಂಡಿದ್ದು, ವಾಹನ ಸವಾರರು ಪರದಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ.

ಭಾರೀ ಮಳೆಗೆ ಕೆರೆಯಂತಾದ ರೈಲ್ವೆ ಅಂಡರ್ ಪಾಸ್..

ಅಂಡರ್ ಪಾಸ್ ಕೆಳಗೆ ನೀರು ತುಂಬಿಕೊಂಡು ಕೆರೆಯಂತಾಗಿದೆ. ಈ ರಸ್ತೆ ಮಾರ್ಗವಾಗಿ ಓಡಾಡುವ ಸ್ಥಳೀಯರು, ಸಾರ್ವಜನಿಕರಿಗೆ ಸಾಕಷ್ಟು ತೊಂದರೆಯಾಗಿದೆ. ಕೋಲಾರದ ನಗರದಿಂದ ಕೀಲುಕೋಟೆ ಮಾರ್ಗವಾಗಿ ವಿವಿಧ ಗ್ರಾಮಗಳಿಗೆ ತೆರೆಳುವ ಮಾರ್ಗಮಧ್ಯೆದಲ್ಲಿರುವ ರೈಲ್ವೆ ಅಂಡರಪಾಸ್ ಇದಾಗಿದೆ. ಕಳೆದ ಎಂಟು ವರ್ಷಗಳಿಂದಲೂ ಜನರು ಇದೇ ತೊಂದರೆ ಅನುಭವಿಸುತ್ತಿದ್ದಾರೆ.

ಕಳೆದ ಬಾರಿ ಸುರಿದ ಮಳೆಯಿಂದಾಗಿ ಈ ಅಂಡರ್ ಪಾಸ್​ನಲ್ಲಿ ಇನ್ನೋವಾ ಕಾರೊಂದು ನೀರಿನಲ್ಲಿ ಮುಳುಗಡೆಯಾಗಿದೆ. ಕಾರಿನಲ್ಲಿದ್ದವರು ಗಾಜು ಒಡೆದು ಹೊರ ಬಂದು ತಮ್ಮ ಪ್ರಾಣ ಉಳಿಸಿಕೊಂಡಿದ್ದರು. ಇದೇ ಮಾರ್ಗ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಮಳೆಗಾಲದಲ್ಲಿ ಶಾಲಾ ಮಕ್ಕಳು, ರೋಗಿಗಳು ಹಾಗೂ ಸಾರ್ವಜನಿಕರು ಓಡಾಡಲು ಸಮಸ್ಯೆಯಾಗುತ್ತಿದೆ.

ಮಳೆಗಾಲದಲ್ಲಿ ಈ ರೈಲ್ವೆ ಅಂಡರ್ ಪಾಸ್ ಮೃತ್ಯುಕೂಪವಾಗಿ ಪರಿಣಮಿಸಿದೆ. ಸಂಬಂಧಪಟ್ಟ ರೈಲ್ವೆ ಇಲಾಖೆ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸುವಂತೆ ಹಲವು ಬಾರಿ ಮನವಿ ಮಾಡಿದ್ರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದ್ರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಸಮಸ್ಯೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಬೇಕಾಗಿದೆ.

ಇದನ್ನೂ ಓದಿ:ಶಾಸಕ ಎಂಪಿ ರೇಣುಕಾಚಾರ್ಯಗೆ ಅಭಿನಂದನೆ ಸಲ್ಲಿಸಿದ ರಾಜೇಶ್ ಕೃಷ್ಣನ್‌

ABOUT THE AUTHOR

...view details