ಕೋಲಾರ: ಮಾಜಿ ಸಂಸದ ಕೆ.ಎಚ್. ಮುನಿಯಪ್ಪ ಜೆಡಿಎಸ್ ಹಾಗೂ ಬಿಜೆಪಿ ಜೊತೆಗೆ ಸಂಬಂಧ ಹೊಂದಿದ್ದಾರೆ. ಹೀಗಾಗಿ ಅವರನ್ನು ಕೂಡಲೇ ಕಾಂಗ್ರೆಸ್ನಿಂದ ಉಚ್ಚಾಟನೆ ಮಾಡುವಂತೆ ಮಾಜಿ ಸಚಿವ ವರ್ತೂರು ಪ್ರಕಾಶ್ ಆಗ್ರಹಿಸಿದರು.
ಕೆ.ಎಚ್. ಮುನಿಯಪ್ಪರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕು: ವರ್ತೂರು ಪ್ರಕಾಶ್ - should be expelled from the party
ಪ್ರತಿ ವಿಧಾನಸಭಾ ಚುನಾವಣೆಯಲ್ಲೂ ಕೆ.ಎಚ್.ಮುನಿಯಪ್ಪ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಜೆಡಿಎಸ್ ಸೇರಿದಂತೆ ಬೇರೆಲ್ಲಾ ಪಕ್ಷಗಳೊಂದಿಗೆ ಕೈ ಜೋಡಿಸಿ, ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಿದರೆ, ನಿಷ್ಟಾವಂತ ಕಾರ್ಯಕರ್ತರು ಬೆಳೆಯುತ್ತಾರೆ ಎಂದರು ಮಾಜಿ ಸಚಿವ ವರ್ತೂರು ಪ್ರಕಾಶ್ ಹೇಳಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೈಸೂರು ಪಾಲಿಕೆ ಚುನಾವಣೆ ಸಂದರ್ಭದಲ್ಲಿ, ಜೆಡಿಎಸ್ನೊಂದಿಗೆ ಕೈ ಜೋಡಿಸಬಾರದು ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಆದರೆ ಅರಹಳ್ಳಿ ಸಹಕಾರ ಸಂಘದ ಚುನಾವಣೆಯಲ್ಲಿ ಜೆಡಿಎಸ್, ಬಿಜೆಪಿಯೊಂದಿಗೆ ಸೇರಿ, ಕಾಂಗ್ರೆಸ್ ಪಕ್ಷ ತಲೆತಗ್ಗಿಸುವಂತೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಪ್ರತಿ ವಿಧಾನಸಭಾ ಚುನಾವಣೆಯಲ್ಲೂ ಕೆ.ಎಚ್. ಮುನಿಯಪ್ಪ ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಜೆಡಿಎಸ್ ಸೇರಿದಂತೆ ಬೇರೆಲ್ಲಾ ಪಕ್ಷದೊಂದಿಗೆ ಕೈ ಜೋಡಿಸಿ, ಪಕ್ಷ ವಿರೋಧಿ ಚಟುವಟಿಕೆ ಮಾಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಚಾಟನೆ ಮಾಡಿದರೆ, ನಿಷ್ಟಾವಂತ ಕಾರ್ಯಕರ್ತರು ಬೆಳೆಯುತ್ತಾರೆ ಎಂದರು.