ಕೋಲಾರ ಚಿಕ್ಕಬಳ್ಳಾಪುರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಲಿಮಿಟೆಡ್ (ಕೆಸಿಡಿಸಿಸಿಬಿ)ಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಕೌಂಟೆಂಟ್, ಅಸಿಸ್ಟೆಂಟ್ ಮ್ಯಾನೇಜರ್, ಡ್ರೈವರ್ ಸೇರಿದಂತೆ ಒಟ್ಟು 36 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆ ನೇಮಕಾತಿ, ಅರ್ಜಿ ಸಲ್ಲಿಕೆ, ವೇತನ ಸೇರಿದಂತೆ ಇನ್ನಿತರ ಮಾಹಿತಿ ಈ ಕೆಳಗಿನಂತಿದೆ.
ಹುದ್ದೆ: ಕೋಲಾರ ಮತ್ತು ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ನಲ್ಲಿ 9 ಅಕೌಂಟೆಟ್ ಹುದ್ದೆ, 13+1 ಅಸಿಸ್ಟಂಟ್ ಮ್ಯಾನೇಜರ್ ಹುದ್ದೆ, 3 ಡ್ರೈವರ್ ಹುದ್ದೆ ಜೊತೆಗೆ 10 ಜವಾನ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಹತೆ: ಸಹಾಯಕರು ಮತ್ತು ಲೆಕ್ಕಿಗರು, ಚಾಲಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಯಾವುದೇ ವಿಷಯದಲ್ಲಿ ಪದವಿಯನ್ನು ಪಡೆದಿರಬೇಕು. ಉಳಿದ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಎಸ್ಎಲ್ಸಿ, ಮತ್ತು ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ: ಮೇಲ್ಕಂಡ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷವಾಗಿದ್ದು, ಗರಿಷ್ಠ 35 ವರ್ಷ ವಯಸ್ಸನ್ನು ಮೀರಿರಬಾರದು. ಒಬಿಸಿ , ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ವರ್ಗದವರಿಗೆ 3 ವರ್ಷ ವಯೋಮಿತಿ ಸಡಿಲಿಕೆ ಆಗಿರಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಇದೆ.
ಅರ್ಜಿ ಸಲ್ಲಿಕೆ ವಿಧಾನ: ಸಾಮಾನ್ಯ, ಒಬಿಸಿ ಅಭ್ಯರ್ಥಿಗಳಿಗೆ 1000 ರೂ ಅರ್ಜಿ ಶುಲ್ಕ ವಿಧಿಸಲಾಗಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ 1, ವಿಕಲಚೇತನರಿಗೆ 500 ರೂ ಅರ್ಜಿ ಶುಲ್ಕ ವಿಧಿಸಲಾಗಿದೆ. ಈ ಅರ್ಜಿ ಶುಲ್ಕವನ್ನು ಅಭ್ಯರ್ಥಿಗಳು ಆನ್ಲೈನ್ ಮೂಲಕ ಭರ್ತಿ ಮಾಡಬೇಕಿದೆ.