ಕೋಲಾರ: ತೀವ್ರ ಕುತೂಹಲ ಕೆರಳಿಸಿದ್ದ ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದೆ. ಮಾಲೂರು ಶಾಸಕ ಕೆ.ವೈ.ನಂಜೇಗೌಡ ಎರಡನೇ ಬಾರಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ.
ಕೋಲಾರ- ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಚುನಾವಣೆ... ಶಾಸಕ ನಂಜೇಗೌಡ ಅವಿರೋಧ ಆಯ್ಕೆ - Kannada news
ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದ ಅಧ್ಯಕ್ಷ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗುವ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಬಿದ್ದಿದ್ದು, ಮಾಲೂರು ಶಾಸಕ ಕೆ.ವೈ.ನಂಜೇಗೌಡ ಎರಡನೇ ಬಾರಿಗೆ ಅವಿರೋಧ ಆಯ್ಕೆ ಆಗಿದ್ದಾರೆ.
ಇಂದು ಬೆಳಿಗ್ಗೆ ಸಚಿವರಾದ ಕೃಷ್ಣಬೈರೇಗೌಡ, ಶಿವಶಂಕರ್ ರೆಡ್ಡಿ ಹಾಗೂ ಜಿಲ್ಲೆಯ ಕೆಲವು ಶಾಸಕರು ಹೊಸದಾಗಿ ಆಯ್ಕೆಯಾದ ನಿರ್ದೇಶಕರುಗಳೊಂದಿಗೆ ಮಾತುಕತೆ ನಡೆಸಿ ಅಂತಿಮವಾಗಿ ಮಾಲೂರು ಶಾಸಕ ಕೆ.ವೈ.ನಂಜೇಗೌಡರನ್ನು ಮೊದಲ ಅವಧಿಗೆ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲು ನಿರ್ಧರಿಸಿ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ವೇಳೆ ಮಾತನಾಡಿದ ನಂಜೇಗೌಡ, ಸಮ್ಮಿಶ್ರ ಸರ್ಕಾರದ ಸಿಎಂ ಹೆಚ್ಡಿಕೆ ಹಾಗೂ ಸಿದ್ದರಾಮಯ್ಯ, ಜಿ.ಪರಮೇಶ್ವರ್ ಅವರ ಆಶೀರ್ವಾದಿಂದ ನಾನು ಅಧ್ಯಕ್ಷನಾಗಿದ್ದೆನೆ. ನಾನು ಅಂದುಕೊಂಡಂತೆ ಗೋಡ್ಡನ್ ಡೈರಿ ಹಾಗೂ ಬೆಂಗಳೂರಿನ ಹಾಲು ಉತ್ಪಾದಕರ ಹೆಣ್ಣುಮಕ್ಕಳಿಗೆ ಹಾಸ್ಟೆಲ್ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದು, ಆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಉದ್ದೇಶದಿಂದ ಮತ್ತೊಮ್ಮೆ ಅಧ್ಯಕ್ಷನಾಗಿದ್ದೇನೆ ಎಂದು ಹೇಳಿದರು.