ಕೋಲಾರ:ರಾತ್ರಿ ಪಾಳಯದಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿ ಠಾಣೆಯಲ್ಲಿಯೇ ಕುಳಿತು ಮದ್ಯಪಾನ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಶ್ರೀನಿವಾಸಪುರ ತಾಲೂಕಿನ ಗೌನಿಪಲ್ಲಿ ಪೊಲೀಸ್ ಠಾಣೆಯಲ್ಲಿ ಘಟನೆ ಜರುಗಿದೆ ಎನ್ನಲಾಗುತ್ತಿದೆ.
ಪೊಲೀಸ್ ಪೇದೆಗಳಾದ ಚಲಪತಿ, ಆಂಜಿ ಹಾಗೂ ಮಂಜುನಾಥ್ ಮದ್ಯ ಸೇವಿಸುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕರ್ತವ್ಯದ ಸಮಯದಲ್ಲಿ ಪೊಲೀಸ್ ಠಾಣೆಯನ್ನೇ ಬಾರ್ ರೀತಿಯಲ್ಲಿ ಪರಿವರ್ತಿಸಿರುವ ಸಿಬ್ಬಂದಿಯ ಬೇಜವಾಬ್ದಾರಿ ವರ್ತನೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು ಕಠಿಣ ಕ್ರಮಕ್ಕೆ ಆಗ್ರಹಿಸುತ್ತಿದ್ದಾರೆ.