ಕೋಲಾರ:ಜಿಲ್ಲೆಯಲ್ಲಿ ಕಠಿಣ ಲಾಕ್ಡೌನ್ ಜಾರಿಯಲ್ಲಿದ್ದರೂ ನಿಯಮ ಉಲ್ಲಂಘಿಸಿ ಸಮಾಧಿ ಬಳಿ ಪ್ರಾರ್ಥನೆ ಮಾಡುತ್ತಿದ್ದವರ ಬೈಕ್ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಜಿಲ್ಲೆಯಲ್ಲಿ ಕಠಿಣ ಲಾಕ್ಡೌನ್ ಜಾರಿಯಲ್ಲಿರುವುದರಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ಎಲ್ಲ ರಸ್ತೆಗಳಲ್ಲೂ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಜೊತೆಗೆ ಅನಾವಶ್ಯಕವಾಗಿ ತಿರುಗಾಡುವವರಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಈ ನಡುವೆ ನಗರದ ಈದ್ಗಾ ಮೈದಾನದಲ್ಲಿ ಮೃತ ಸಂಬಂಧಿ ಸಮಾಧಿ ಬಳಿ ಹಲವರು ಗುಂಪು ಗುಂಪಾಗಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈ ವೇಳೆ ಪೊಲೀಸರು ಸ್ಥಳಕ್ಕೆ ತೆರಳಿ 20ಕ್ಕೂ ಹೆಚ್ಚು ಬೈಕ್ಗಳನ್ನ ವಶಕ್ಕೆ ಪಡೆದಿದ್ದಾರೆ.