ಕೋಲಾರ: ಸಿಎಂ ಬದಲಾವಣೆ ವಿಚಾರ ಹಿನ್ನೆಲೆ ಮುನ್ನೆಲೆಗೆ ಬರುತ್ತಿದ್ದಂತೆ ಕೋಲಾರದಲ್ಲಿ ಮಠಾಧೀಶರುಗಳು ಸಭೆ ನಡೆಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಬೆಂಬಲ ಸೂಚಿಸಿ, ಶಾಸಕ ಯತ್ನಾಳ್ ವಿರುದ್ಧ ಗುಡುಗಿದ್ದಾರೆ.
ತಾಲೂಕಿನ ನಾಗಲಾಪುರ ಮಠದಲ್ಲಿ ಬೆಳ್ಳಾವಿ ಮಠದ ಮಹಾಂತಲಿಂಗೇಶ್ವರ ಸ್ವಾಮೀಜಿ ಹಾಗೂ ನಾಗಲಾಪುರ ಸಂಸ್ಥಾನದ ಮಠಾಧೀಶರಾದ ತೇಜೇಶಲಿಂಗ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ಸಭೆ ಸೇರಿದ್ದು, ಎಲ್ಲರೂ ಸಿಎಂ ಪರ ಬ್ಯಾಟಿಂಗ್ ಮಾಡಿದ್ದಾರೆ. ಮುಂದಿನ ಎರಡೂವರೆ ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ ಆಗಿ ಮುಂದುವರಿಯಬೇಕು ಎಂದು ಆಗ್ರಹಿಸಿದ್ದಾರೆ. ಒಂದು ವೇಳೆ ಬದಲಾವಣೆ ಮಾಡಿದ್ದೇ ಆದಲ್ಲಿ 3000ಕ್ಕೂ ಹೆಚ್ಚು ಮಠಗಳು ಬಿಎಸ್ವೈ ಅವರನ್ನು ಉಳಿಸಿಕೊಳ್ಳಲಿ ಎಂಬ ಸಂದೇಶ ರವಾನಿಸಿದ್ದಾರೆ.
ಸಮಗ್ರ ಕರ್ನಾಟಕ ಅಭಿವೃದ್ಧಿಗೆ ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಬೇಕು. ಸಿಎಂ ಬದಲಾವಣೆ ಆಗಿದ್ದೇ ಆದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿಗೆ ಉಳಿಗಾಲವಿಲ್ಲ ಎಂಬ ಎಚ್ಚರಿಕೆಯನ್ನು ನೀಡಿದರು.