ಕೋಲಾರ:ನಗರದಲ್ಲಿಂದು ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನ ವಿತರಿಸಲಾಯಿತು.
ಕೋಲಾರ: ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ - Kolar DC Satyabhama
ಕೋಲಾರ ಜಿಲ್ಲಾಧಿಕಾರಿ ಸತ್ಯಭಾಮ ಅವರು ವಿಕಲಚೇತನ ಫಲಾನುಭವಿಗಳಿಗೆ ಯಂತ್ರಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿದರು.
ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ವಿತರಣೆ
ಕೋಲಾರ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಸತ್ಯಭಾಮ ಚಾಲನೆ ನೀಡಿದರು. ಜಿಲ್ಲೆಯಾದ್ಯಂತ ಪ್ರತಿ ಜಿಲ್ಲಾ ಪಂಚಾಯ್ತಿ ಕ್ಷೇತ್ರಗಳ ಫಲಾನುಭವಿಗಳಿಗೆ ಅನುಗುಣವಾಗಿ ಸುಮಾರು 23 ವಿಕಲಚೇತನ ಫಲಾನುಭವಿಗಳಿಗೆ ದ್ವಿಚಕ್ರ ವಾಹನಗಳನ್ನ ವಿತರಿಸಿದರು. ಇದಕ್ಕೂ ಮೊದಲು ಜಿಲ್ಲಾ ಪಂಚಾಯತ್ ವತಿಯಿಂದ ಎಲ್ಲಾ ವಾಹನಗಳಿಗೆ ಪೂಜೆ ಸಲ್ಲಿಸಿದ್ರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಸಿ.ಎಸ್. ವೆಂಕಟೇಶ್ ಸೇರಿದಂತೆ ಪ್ರಮುಖರು ಭಾಗವಹಿಸಿದ್ದರು.