ಕರ್ನಾಟಕ

karnataka

ETV Bharat / state

ಕೋಲಾರದಿಂದ ಸ್ಪರ್ಧೆ: ಸಿದ್ದರಾಮಯ್ಯ ಮನವೊಲಿಕೆಗೆ ಮುಂದುವರಿದ ಕಸರತ್ತು

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಆಹ್ವಾನ- ಕೋಲಾರ ನಾಯಕರಿಂದ ಮಾಜಿ ಸಿಎಂ ಭೇಟಿ ಮಾಡಿ ಮಾತುಕತೆ.

ಸಿದ್ದರಾಮಯ್ಯ ಮನವೊಲಿಕೆಗೆ ಮುಂದುವರಿದ ಕಸರತ್ತು
ಸಿದ್ದರಾಮಯ್ಯ ಮನವೊಲಿಕೆಗೆ ಮುಂದುವರಿದ ಕಸರತ್ತು

By

Published : Jul 13, 2022, 8:16 PM IST

ಬೆಂಗಳೂರು:ಮುಂದಿನ ವಿಧಾನಸಭೆ ಚುನಾವಣೆಗೆ ಕ್ಷೇತ್ರ ಹುಡುಕಾಟದಲ್ಲಿರುವ ಸಿದ್ದರಾಮಯ್ಯ ಅವರನ್ನು ಕೋಲಾರದಿಂದಲೇ ಕಣಕ್ಕಿಳಿಸಬೇಕು ಎಂದು ಆ ಭಾಗದ ನಾಯಕರು ಮಾಜಿ ಸಿಎಂ ಅವರನ್ನು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು. ಇದು ಈ ವಾರದಲ್ಲಿ ನಡೆದ ಮೂರನೇ ಭೇಟಿಯಾಗಿದೆ. ಈ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯರಾದ ಅನಿಲ್ ಕುಮಾರ್, ನಸೀರ್ ಅಹಮದ್, ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇದ್ದರು.

ಸಿದ್ದರಾಮಯ್ಯ ಅವರು ಕೋಲಾರದಿಂದ ಸ್ಪರ್ಧಿಸುವಂತೆ ಮನವೊಲಿಸಲು ಆ ಭಾಗದ ಮುಖಂಡರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಸದ್ಯ ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಾದ ಸಿದ್ದರಾಮಯ್ಯ ಅವರು ತಮ್ಮ ಜಿಲ್ಲೆಯನ್ನು ಪ್ರತಿನಿಧಿಸಿದರೆ ಪಕ್ಷ ಇನ್ನಷ್ಟು ಬಲಗೊಳ್ಳಲಿದೆ ಎಂಬ ವಿಶ್ವಾಸ ಆ ಭಾಗದ ನಾಯಕರದ್ದಾಗಿದೆ. ಕಳೆದ ಒಂದು ವಾರದಲ್ಲಿ ಮೂರನೇ ಬಾರಿಗೆ ಸಿದ್ದರಾಮಯ್ಯ ಅವರ ಜೊತೆ ಸಭೆ ನಡೆಸಿದ್ದಾರೆ.

ಶ್ರೀನಿವಾಸ್​ಗೌಡ ಕ್ಷೇತ್ರ ತ್ಯಾಗ:ಇತ್ತೀಚೆಗೆ ವಿಭಾಗದ ಪ್ರಮುಖ ನಾಯಕರಾದ ಎಂ.ಸಿ. ಸುಧಾಕರ್ ಹಾಗೂ ಕೊತ್ತೂರು ಮಂಜುನಾಥ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಸಿದ್ದರಾಮಯ್ಯ ಕೋಲಾರದಿಂದಲೇ ಸ್ಪರ್ಧಿಸಬೇಕು ಎಂದು ತೀವ್ರ ಒತ್ತಡ ಹಾಕುತ್ತಿದ್ದಾರೆ. ಈ ಮಧ್ಯೆಯೇ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್​ಗೌಡ ಕಾಂಗ್ರೆಸ್ ಸೇರ್ಪಡೆಗೆ ಮುಂದಾಗಿದ್ದು, ತಮ್ಮ ಕ್ಷೇತ್ರವನ್ನು ಬಿಟ್ಟುಕೊಡಲು ಸಹ ಸಿದ್ಧರಾಗಿದ್ದಾರೆ.

ಬಾದಾಮಿ ದೂರ:ಬಾದಾಮಿಯಿಂದ ಇನ್ನೊಮ್ಮೆ ಸ್ಪರ್ಧಿಸಿದರೆ ಅಲ್ಲಿಗೆ ಓಡಾಡುವುದು ಕಷ್ಟವಾಗಲಿದೆ. ಇದರಿಂದ ಬೆಂಗಳೂರು ಇಲ್ಲವೇ ಬೆಂಗಳೂರು ನಗರಕ್ಕೆ ಸಮೀಪದಲ್ಲಿರುವ ಜಿಲ್ಲೆಯಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ. ಇದು ತಮ್ಮ ಕಡೆಯ ಚುನಾವಣೆ ಎಂದು ಹೇಳಿರುವ ಹಿನ್ನೆಲೆಯಲ್ಲಿ ಅವರಿಗೆ ಹಲವು ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಆಹ್ವಾನಿಸಲಾಗುತ್ತಿದೆ.

ಓದಿ;ಮಳೆ ಹಾನಿ ಪ್ರದೇಶಕ್ಕೆ ತೆರಳಿದ ಕೇಂದ್ರ ಸಚಿವೆ ಕರಂದ್ಲಾಜೆ.. ಕಾಟಾಚಾರದ ಭೇಟಿ ಎಂದು ಸ್ಥಳೀಯರ ಆಕ್ರೋಶ

ABOUT THE AUTHOR

...view details