ಕೋಲಾರ: ಗ್ರಾಮಕ್ಕೆ ರಸ್ತೆ ಸಂಪರ್ಕ ಕಲ್ಪಿಸುವಂತೆ ಆಗ್ರಹಿಸಿ ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬಿಪುರ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವ ನಿರ್ಧಾರ ಮಾಡಿದ್ದಾರೆ.
ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯರಸ್ತೆ ಸೇರಿದಂತೆ ಗ್ರಾಮದಲ್ಲಿ ಕನಿಷ್ಠ ಮೂಲ ಸೌಲಭ್ಯಗಳಿಲ್ಲ. ಹಾಗಾಗಿ ಮತದಾನ ಬಹಿಷ್ಕಾರ ಮಾಡಲು ಮಾಲೂರು ತಾಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಬಿಪುರ ಗ್ರಾಮಸ್ಥರು ತೀರ್ಮಾನಿಸಿದ್ದಾರೆ.