ಕೋಲಾರ: ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವವರೆಗೂ ರಾಜ್ಯದಲ್ಲಿ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ ಎಂದು ಕೋಲಾರದಲ್ಲಿ ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಬರುವವರೆಗೂ ಮದ್ಯದಂಗಡಿಗಳನ್ನು ತೆರೆಯುವುದಿಲ್ಲ: ಅಬಕಾರಿ ಸಚಿವ - Excise Minister H. Nagesh Latest News
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕು ತಡೆಗಟ್ಟುವವರೆಗೂ ರಾಜ್ಯದಲ್ಲಿ ಮದ್ಯದಂಗಡಿಗಳನ್ನ ತೆರೆಯುವುದಿಲ್ಲ ಎಂದು ಅಬಕಾರಿ ಸಚಿವ ಎಚ್.ನಾಗೇಶ್ ತಿಳಿಸಿದ್ದಾರೆ.
ನಗರದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕ ಹೆಚ್ಚಾಗುತ್ತಿದ್ದು, ಕೊರೊನಾ ಸೋಂಕು ತಡೆಗಟ್ಟುವವರೆಗೂ ಮದ್ಯದಂಗಡಿಗಳನ್ನ ತೆರೆಯುವುದಿಲ್ಲ ಎಂದರು. ಅಲ್ಲದೆ ರಾಜ್ಯದಾದ್ಯಂತ ಲಾಕ್ ಡೌನ್ ಆಗಿರುವ ಹಿನ್ನಲೆ ಲಾಕ್ ಡೌನ್ ಮುಗಿದ ಬಳಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದ ನಂತರವೆ ಮದ್ಯದಂಗಡಿಗಳನ್ನ ತೆರೆಯುವುದರ ಕುರಿತು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದರು.
ಕೋಲಾರದ ಗಡಿಭಾಗವಾದ ಬೆಂಗಳೂರು ಗ್ರಾಮಾಂತರ ಭಾಗದ ಬೈಲನರಸಾಪುರದಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಜೊತೆಗೆ ಕೊರೊನಾ ಸೋಂಕಿತ ವ್ಯಕ್ತಿ ಕೋಲಾರ ತಾಲೂಕಿನ ವೇಮಗಲ್ ಸೇರಿದಂತೆ ನರಸಾಪುರ ಭಾಗಗಳಲ್ಲಿ ತಿರುಗಾಡಿದ್ದು, ಸೋಂಕಿತನ ಟ್ರಾವೆಲ್ ಹಿಸ್ಟರಿಯನ್ನ ಅಧಿಕಾರಿಗಳು ಹಾಗೂ ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆಂದರು. ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಕೊರೊನಾ ಸೋಂಕು ಕಂಡುಬಂದಿಲ್ಲ.ಆದರೂ ಜಿಲ್ಲೆಯ ಎಲ್ಲಾ ಗಡಿಭಾಗಗಳಲ್ಲಿ ನಿಗಾವಹಿಸಲಾಗಿದೆ ಎಂದರು.