ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಲಾಕ್ಡೌನ್ ನಿಯಮ ಉಲ್ಲಂಘನೆ ಮಾಡುವ ಮೂಲಕ ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಲಾಕ್ಡೌನ್ ನಡುವೆಯೂ ಗುಂಪಾಗಿ ಪೂಜೆ... ರಮೇಶ್ ಕುಮಾರ್ಗೆ ನೆಟ್ಟಿಗರಿಂದ 'ಮಂಗಳಾರತಿ'
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಆನವಟ್ಟಿ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಮುಖಂಡರು, ಸ್ಥಳೀಯರನ್ನ ಸೇರಿಸಿಕೊಂಡು ಗುಂಪು ಗುಂಪಾಗಿ ಪೂಜೆ ಸಲ್ಲಿಸಿದ್ದು,ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಬಡವರಿಗೊಂದು ನ್ಯಾಯ, ಶ್ರೀಮಂತರಿಗೊಂದು ನ್ಯಾಯ ಎಂದು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಆನವಟ್ಟಿ ಗ್ರಾಮದ ಕೆರೆಗೆ ಕೆ.ಸಿ.ವ್ಯಾಲಿ ನೀರು ಹರಿದ ಹಿನ್ನೆಲೆ, ರಮೇಶ್ ಕುಮಾರ್ ಅವರು ಮುಖಂಡರು, ಸ್ಥಳೀಯರನ್ನ ಸೇರಿಸಿಕೊಂಡು ಪೂಜೆ ಸಲ್ಲಿಸಿದರು. ಪೂಜೆ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಗುಂಪು ಗುಂಪಾಗಿರುವ ವಿಡಿಯೋ ವೈರಲ್ ಆಗಿದ್ದು, ಬಡವರಿಗೊಂದು ನ್ಯಾಯ, ಶ್ರೀಮಂತರಿಗೊಂದು ನ್ಯಾಯ ಎಂದು ನೆಟ್ಟಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ.
ಅಲ್ಲದೆ, ಮದುವೆಗೆ 20 ಜನರಿಗೆ ಮಾತ್ರ ಅವಕಾಶ ನೀಡುವ ಸರ್ಕಾರ ಮತ್ತು ಅಧಿಕಾರಿಗಳು, ಕೆರೆ ಪೂಜೆಗೆ ನೂರಾರು ಜನರನ್ನ ಸೇರಿಸಿಕೊಂಡ ರಮೇಶ್ ಕುಮಾರ್ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಿದ್ದಾರೆಂದು ಪೊಸ್ಟ್ ಮಾಡುತ್ತಿದ್ದಾರೆ.