ಕೋಲಾರ :ಅಬಕಾರಿ ಸಚಿವ ಹೆಚ್ ನಾಗೇಶ್ ಅವರೇ ಕೋಲಾರದಲ್ಲಿ ಲಾಕ್ಡೌನ್ ಉಲ್ಲಂಘನೆ ಮಾಡುವ ಮೂಲಕ ಜನಸಾಮಾನ್ಯರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.
ಅಬಕಾರಿ ಸಚಿವ ಹೆಚ್ ನಾಗೇಶ್ ಅವರಿಂದ ಲಾಕ್ಡೌನ್ ಉಲ್ಲಂಘನೆ ಆರೋಪ ಇವತ್ತು ಮುಳಬಾಗಿಲಿನ ಎಸ್‌ಎನ್‌ಎನ್ ಕ್ರಾಸ್ ಬಳಿ ನೂತನ ಸರ್ಕಾರಿ ನ್ಯಾಯಬೆಲೆ ಅಂಗಡಿಯ ಪೂಜಾ ಕಾರ್ಯಕ್ರಮವನ್ನ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ನೂರಾರು ಜನರು ಭಾಗವಹಿಸಿದ್ದು, ಸಾಮಾಜಿಕ ಅಂತರವೂ ಇಲ್ಲದೆ, ದೈಹಿಕ ಅಂತರವೂ ಇಲ್ಲದೆ, ಮಾಸ್ಕ್ ಕೂಡಾ ಇಲ್ಲದೆ ಇರೋದು ಕಂಡು ಬಂತು.
ಇನ್ನು, ಲಾಕ್ಡೌನ್ ದಿನದಂದೆ ಕಾರ್ಯಕ್ರಮವನ್ನ ಆಯೋಜನೆ ಮಾಡಿರುವುದು ಜೊತೆಗೆ ನಿಯಮಗಳನ್ನ ಗಾಳಿಗೆ ತೂರಿ, ನೂರಾರು ಜನರನ್ನೊಳಗೊಂಡಂತೆ ಕಾರ್ಯಕ್ರಮವನ್ನ ಉದ್ಘಾಟನೆ ಮಾಡುವ ಮೂಲಕ ಲಾಕ್ಡೌನ್ ಉಲ್ಲಂಘನೆ ಮಾಡಿದ್ದಾರೆ.
ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ರೂ ಸಚಿವರು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದ್ದಾರೆಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ ಸಚಿವರಿಗೆ ಒಂದು ನಿಯಮ, ಜನ ಸಾಮಾನ್ಯರಿಗೆ ಒಂದು ನಿಯಮಾನಾ ಅಂತಾ ಪ್ರಶ್ನಿಸುತ್ತಿದ್ದಾರೆ.