ಕರ್ನಾಟಕ

karnataka

ETV Bharat / state

ಲೋಕಾಯುಕ್ತ ಸಂಸ್ಥೆ ಸರ್ಕಾರದ ಕಾವಲು ನಾಯಿ ಇದ್ದಂತೆ: ಕೆ.ಎನ್‌ ಫಣೀಂದ್ರ - ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮ

ಉಪಲೋಕಾಯುಕ್ತ ಕೆ ಎನ್ ಫಣೀಂದ್ರ ಅವರು ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿಯಾಗಿ ಲೋಕಾಯುಕ್ತದ ಕುರಿತು ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಸಾರ್ವಜನಿಕ ಸ್ಪಂದನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

K N Phaneendra
ಕೆ ಎನ್ ಫಣೀಂದ್ರ

By

Published : Dec 18, 2022, 9:07 AM IST

ಸಾರ್ವಜನಿಕರ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮ

ಕೋಲಾರ‌: ಲೋಕಾಯುಕ್ತ ಸಂಸ್ಥೆಯು ಸರ್ಕಾರದ ಕಾವಲು ನಾಯಿ ಇದ್ದ ಹಾಗೆ ಎಂದು ಉಪ ಲೋಕಾಯುಕ್ತ ಕೆ ಎನ್ ಫಣೀಂದ್ರ ಅಭಿಪ್ರಾಯಪಟ್ಟರು. ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದುಕೊರತೆ ಸ್ವೀಕರಿಸುವ ಮೂರು ದಿನಗಳ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಅವರು ಮಾತನಾಡಿದರು.

ಸರ್ಕಾರದ ಸಂವಿಧಾನದತ್ತ ಹಕ್ಕುಗಳನ್ನು ಸಾರ್ವಜನಿಕರಿಗೆ ತಲುಪಿಸುವಲ್ಲಿ ಕಾರ್ಯಾಂಗದ ಪಾತ್ರ ಮಹತ್ವದ್ದು. ಅದರಲ್ಲಿ ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ ಎಸಗಿದರೆ ಅಥವಾ ಕರ್ತವ್ಯ ಲೋಪ ಮಾಡಿದರೆ ಅವರನ್ನು ನೋಡಿಕೊಳ್ಳಲೆಂದೇ ಲೋಕಾಯುಕ್ತ ಸಂಸ್ಥೆ ಸ್ಥಾಪನೆಯಾಗಿದೆ. ಹಕ್ಕುಚ್ಯುತಿ ಕಂಡುಹಿಡಿಯಲು ಮತ್ತು ನೊಂದವರಿಗೆ ಪರಿಹಾರ ದೊರಕಿಸಿಕೊಡಲು ಸರ್ಕಾರ ಸ್ಥಾಪಿಸಿದ ಸಂಸ್ಥೆಗಳಲ್ಲಿ ಲೋಕಾಯುಕ್ತವೂ ಒಂದು ಎಂದರು.

ಹಕ್ಕುಚ್ಯುತಿ ಸಂದರ್ಭದಲ್ಲಿ ಸಾರ್ವಜನಿಕರು ಪೊಲೀಸರು ಅಥವಾ ನ್ಯಾಯಾಲಯದ ಬಳಿ ಹೋಗುತ್ತಾರೆ. ಆದರೆ, ಎಲ್ಲಾ ಪ್ರಶ್ನೆಗಳಿಗೆ ನ್ಯಾಯಾಲಯ ಉತ್ತರವಲ್ಲ. ಕೆಲವು ಸಂದರ್ಭಗಳಲ್ಲಿ ಶೀಘ್ರ ಪರಿಶೀಲನೆಗಾಗಿ ಲೋಕಾಯುಕ್ತ ಸಂಸ್ಥೆಯ ಬಳಿ ಬರಬಹುದು ಎಂದು ತಿಳಿಸಿದರು.

ಇದನ್ನೂ ಓದಿ:ಜಮೀನು ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಆರೋಪ: ಲೋಕಾಯುಕ್ತ ಬಲೆಗೆ ಬಿದ್ದ ಮೂವರು ನೌಕರರು

ABOUT THE AUTHOR

...view details