ಕರ್ನಾಟಕ

karnataka

By

Published : Jun 4, 2019, 7:58 PM IST

ETV Bharat / state

ಮಂಗಳೂರಿನ ನೀರಿನ ಸಮಸ್ಯೆಗೂ ಎತ್ತಿನ ಹೊಳೆಗೂ ಸಂಬಂಧವಿಲ್ಲ: ಸ್ಪೀಕರ್‌ ರಮೇಶ್ ಕುಮಾರ್

ಕೆಲವರು ಬೇಕು ಅಂತಲೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ವಿರೋಧ ಮಾಡುವರು ನಮ್ಮ ವಿರೋಧಿಗಳಲ್ಲ, ನಮ್ಮ ಅಣ್ಣ-ತಮ್ಮಂದಿರು ಅವರಿಗೆ ನಮ್ಮ ಸಮಸ್ಯೆ ಕುರಿತು ಮನವರಿಕೆ ಮಾಡಲಾಗುವುದೆಂದು ತಿಳಿಸಿದರು.

ಸ್ಪೀಕರ್ ರಮೇಶ್ ಕುಮಾರ್

ಕೋಲಾರ:ಮಂಗಳೂರಿನ ನೀರಿನ ಸಮಸ್ಯೆಗೂ ಎತ್ತಿನಹೊಳೆಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಎತ್ತಿನಹೊಳೆ ಯೋಜನೆಗೆ ಯಾವುದೇ ರೀತಿಯ ಸಮಸ್ಯೆಯಿಲ್ಲ. ಯೋಜನೆ ವೇಗವಾಗಿ ಸಾಗುತ್ತಿದ್ದು, ಜೂನ್‌ 12 ರಂದು ಬಯಲುಸೀಮೆಯ ಎಲ್ಲಾ ಶಾಸಕರು ಕಾಮಗಾರಿಯನ್ನು ಪರಿಶೀಲನೆ ನಡೆಸುತ್ತಾರೆ ಎಂದರು.

ಮಂಗಳೂರಿನ ನೀರಿನ ಸಮಸ್ಯೆಗೂ ಎತ್ತಿನಹೊಳೆಗೂ ಸಂಬಂಧವಿಲ್ಲ. ಕೆಲವರು ಬೇಕು ಅಂತಲೇ ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ. ವಿರೋಧ ಮಾಡುವರು ನಮ್ಮ ವಿರೋಧಿಗಳಲ್ಲ, ನಮ್ಮ ಅಣ್ಣ-ತಮ್ಮಂದಿರು ಅವರಿಗೆ ನಮ್ಮ ಸಮಸ್ಯೆ ಕುರಿತು ಮನವರಿಕೆ ಮಾಡಲಾಗುವುದೆಂದು ತಿಳಿಸಿದರು.

ಸ್ಪೀಕರ್ ರಮೇಶ್ ಕುಮಾರ್

ತಿಪಟೂರು ಮತ್ತು ಚಿಕ್ಕನಾಯಕನಹಳ್ಳಿ ಶಾಸಕರುಗಳ ಚಿಕ್ಕ ಆಕ್ಷೇಪವಿತ್ತು. ಅವರಿಗೆ ದೂರವಾಣಿ ಮೂಲಕ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿದ್ದೇವೆ. ಆಕಾಶದಿಂದ ಬೀಳುವಂತಹ ನೀರು ಪಶ್ಚಿಮಘಟ್ಟಗಳ ಮೂಲಕ ಅರಬ್ಬಿ ಸಮುದ್ರಕ್ಕೆ ಸೇರುತ್ತಿತ್ತು. 65 ವರ್ಷಗಳ ಇತಿಹಾಸದ ಅಂಕಿ ಅಂಶಗಳ ಪ್ರಕಾರ ಸಕಲೇಶ್ವರದ ಕೆಂಪುಹೊಳೆ, ವಾಟದ ಹೊಳೆ, ಹೊಸ ಹೊಳೆ ಸೇರಿದಂತೆ 7 ಹೊಳೆಗಳಿದ್ದು, ಇಲ್ಲಿ ಸುಮಾರು 400 ರಿಂದ 450 ಟಿಎಂಸಿ ನೀರು ಹರಿದು ಪ್ರತಿ ವರ್ಷ ಅರಬ್ಬಿ ಸಮುದ್ರ ಸೇರುತ್ತಿದೆ. ಇಲ್ಲಿ ಸಣ್ಣದಾದ ಗೋಡೆಯನ್ನು ನಿರ್ಮಿಸಿ 24 ಟಿಎಂಸಿ ನೀರನ್ನು ಬಯಲುಸೀಮೆ ಪ್ರದೇಶಗಳಿಗೆ ಹರಿಸಲಾಗುವುದೆಂದು ವಿವರಿಸಿದರು.

ABOUT THE AUTHOR

...view details