ಕೋಲಾರ:ಧನುರ್ಮಾಸ ಬಳಿಕ ಒಳ್ಳೆಯ ದಿನ ನೋಡಿಕೊಂಡು ಸಚಿವ ಸ್ಥಾನ ನೀಡುತ್ತಾರೆಂದು ಕೋಲಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್. ನಾಗೇಶ್ ಹೇಳಿದರು.
ಇಂದು ಕೋಲಾರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಂಕ್ರಾತಿ ಹಬ್ಬದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಧನುರ್ಮಾಸದ ಬಳಿಕ ಒಳ್ಳೆಯ ದಿನ ನೋಡಿಕೊಂಡು ಆಕಾಂಕ್ಷಿಗಳಿಗೆ ಸಚಿವ ಸ್ಥಾನ ನೀಡುತ್ತಾರೆ. ಎಂ.ಎಲ್.ಸಿ ಶಂಕರ್ ಹೇಳಿದಂತೆ ಹಲವರ ತ್ಯಾಗದಿಂದ ಸರ್ಕಾರ ರಚನೆಯಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ ಎಂದರು.