ಕೋಲಾರ:ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತನೆ ಮಾಡಿದ ಕ್ಲರ್ಕ್ಗೆ ಪೋಷಕರು ಚಳಿ ಬಿಡಿಸಿರುವ ಘಟನೆ ಜಿಲ್ಲೆ ಶ್ರೀನಿವಾಸಪುರದ ಎಪಿಎಂಸಿಯಲ್ಲಿ ನಡೆದಿದೆ.
ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಗುಮಾಸ್ತ ಜಗನ್ನಾಥ್ಗೆ ಮಹಿಳೆಯ ಪೋಷಕರು ತರಾಟೆಗೆ ತೆಗೆದುಕೊಂಡಿದ್ದಾರೆ. ಎಪಿಎಂಸಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯರ ಜೊತೆ ಈತ ಅಸಭ್ಯವಾಗಿ ವರ್ತನೆ ಮಾಡುತ್ತಿದ್ದ ಎನ್ನಲಾಗಿದೆ. ಈ ಹಿನ್ನೆಲೆ ಎಪಿಎಂಸಿ ಅಧ್ಯಕ್ಷ ಮತ್ತು ಕಾರ್ಯದರ್ಶಿ ಸಮ್ಮುಖದಲ್ಲಿ ವಿಚಾರಣೆಗೆ ಕರೆಯಲಾಯಿತ್ತು. ವಿಚಾರಣೆ ಸಂದರ್ಭದಲ್ಲಿ ಮಹಿಳೆಯ ಪೋಷಕರು ಕ್ಲರ್ಕ್ಗೆ ಹಿಗ್ಗಾಮುಗ್ಗ ಥಳಿಸಿದ್ದಾರೆ.