ಕೋಲಾರ:ಸೋಮವಾರ ಮನೆಯಿಂದ ಕಾಣೆಯಾಗಿದ್ದ ಯುವತಿ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಕೋಲಾರ ತಾಲೂಕು ಶ್ಯಾನಭೋಗನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೆಲದಿನಗಳ ಹಿಂದೆ ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ - ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ
ಸೋಮವಾರ ಮನೆಯಿಂದ ಕಾಣೆಯಾಗಿದ್ದ ಯುವತಿ ಇಂದು ಮಧ್ಯಾಹ್ನ ಶ್ಯಾನಭೋಗನಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
![ಕೆಲದಿನಗಳ ಹಿಂದೆ ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ Missing young girl found dead](https://etvbharatimages.akamaized.net/etvbharat/prod-images/768-512-6454920-thumbnail-3x2-chaii.jpg)
ಯುವತಿ ಶವವಾಗಿ ಪತ್ತೆ
ಕಾಣೆಯಾಗಿದ್ದ ಯುವತಿ ಶವವಾಗಿ ಪತ್ತೆ
ಕೋಲಾರ ತಾಲೂಕು ಅಗ್ನಿಹಳ್ಳಿ ಗ್ರಾಮದ ರಾಶಿ (19) ಎಂಬಾಕೆ ಮೃತಪಟ್ಟಿದ್ದಾಳೆ. ಸೋಮವಾರ ಮನೆಯಿಂದ ಕಾಣೆಯಾಗಿದ್ದ ಯುವತಿ ಇಂದು ಮಧ್ಯಾಹ್ನ ಶ್ಯಾನಭೋಗನಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ. ಯುವತಿಯ ಸಾವಿನ ಬಗ್ಗೆ ಸಾಕಷ್ಟು ಅನುಮಾನಗಳು ಮೂಡಿದ್ದು, ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.