ಕೋಲಾರ:ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಹಾಗೂ ಅಧಿಕಾರಿಗಳು ನೃತ್ಯ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ, ಬಂಗಾರಪೇಟೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಖಾಸಗಿ ಕಾರ್ಯಕ್ರಮದವೊಂದರಲ್ಲಿ ಅಧಿಕಾರಿಗಳ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಜನರ ಸಮಸ್ಯೆ ಆಲಿಸಿ ಅವರಿಗೆ ಸ್ಪಂದಿಸುವುದನ್ನು ಬಿಟ್ಟು ಮೋಜು ಮಸ್ತಿ ಮಾಡಿದ ತಹಶೀಲ್ದಾರ್ ವಿರುದ್ದ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.