ಕೋಲಾರ:ಸಾರಿಗೆ ನೌಕರರ ಮುಷ್ಕರ ಬೆಂಬಲಿಸಿ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್. ನಾರಾಯಣಸ್ವಾಮಿ ತಟ್ಟೆ, ಲೋಟ ಹಿಡಿದು ಪ್ರತಿಭಟನೆ ನಡೆಸಿದ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ಸಾರಿಗೆ ನೌಕರರ ಮುಷ್ಕರ: ತಟ್ಟೆ, ಲೋಟ ಹಿಡಿದು ಬೆಂಬಲಿಸಿದ ಬಂಗಾರಪೇಟೆ ಶಾಸಕ ಬಂಗಾರಪೇಟೆ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಎದುರು ತಟ್ಟೆ ಲೋಟ ಹಿಡಿದು ಪ್ರತಿಭಟನೆ ನಡೆಸಿದ ಶಾಸಕ ಎಸ್.ಎನ್. ನಾರಾಯಣಸ್ವಾಮಿ, ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಸಾರಿಗೆ ನೌಕರರನ್ನ ಯಡಿಯೂರಪ್ಪ ಸರ್ಕಾರ ಕಡೆಗಣಿಸುವ ಮೂಲಕ ಅವರ ಕುಟುಂಬಗಳನ್ನ ಬೀದಿಗೆ ತಳ್ಳುತ್ತಿದೆ. ಸರ್ಕಾರ ಸಾರಿಗೆ ನೌಕರರ ಬೇಡಿಕೆಗಳನ್ನ ಈಡೇರಿಸುವುದನ್ನ ಬಿಟ್ಟು, ಅವರ ಮೇಲೆ ಎಸ್ಮಾ ಜಾರಿ ಮಾಡುವುದು ಹಾಗೂ ವರ್ಗಾವಣೆ ಮಾಡುತ್ತಿರುವುದು ಖಂಡನೀಯ. ಅಲ್ಲದೇ ತರಬೇತಿಯಲ್ಲಿರುವ ಸಾರಿಗೆ ನೌಕರರನ್ನ ಕೆಲಸದಿಂದ ವಜಾ ಮಾಡುತ್ತೇವೆಂದು ಬೆದರಿಕೆ ಹಾಕಿ ನೋಟಿಸ್ ನೀಡುತ್ತಿರುವ ಸರ್ಕಾರದ ನಡೆಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.
ಓದಿ:ನಾಳೆ ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ತಟ್ಟೆ, ಲೋಟ ಚಳವಳಿ