ಕೋಲಾರ: ಕಸಾಯಿಖಾನೆಗೆ ಸಾಗಿಸುತ್ತಿದ್ದ ಹಸು ಮತ್ತು ಎಮ್ಮೆಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಪೊಲೀಸರು ರಕ್ಷಣೆ ಮಾಡಿದ್ದಾರೆ. ಜಿಲ್ಲೆಯ ಕೆಜಿಎಫ್ ತಾಲೂಕಿನ ಕ್ಯಾಸಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ನಾಟಕ ಗಡಿಭಾಗ ರಾಜಪೇಟ್ ರಸ್ತೆ ಮೂಲಕ ಕೇರಳ ಕಡೆಗೆ ಸಾಗಿಸುತ್ತಿದ್ದ ಹಸುಗಳು ಹಾಗೂ ಎಮ್ಮೆಗಳನ್ನು ರಕ್ಷಿಸಲಾಗಿದೆ.
ಕಸಾಯಿಖಾನೆಗೆ ಸಾಗಿಸುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳ ರಕ್ಷಣೆ - Cattles protection
ಆಂಧ್ರಪ್ರದೇಶದದಿಂದ ಕರ್ನಾಟಕ ಮಾರ್ಗವಾಗಿ ಕೇರಳಕ್ಕೆ ಎರಡು ಟ್ರಕ್ಗಳ ಮೂಲಕ ಸಾಗಿಸಲಾಗುತ್ತಿದ್ದ 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಿಸಲಾಗಿದೆ.
ಕೋಲಾರದಲ್ಲಿ ಜಾನುವಾರುಗಳ ರಕ್ಷಣೆ!
ಇವುಗಳನ್ನು ಆಂಧ್ರಪ್ರದೇಶದದಿಂದ ಕರ್ನಾಟಕ ಮಾರ್ಗವಾಗಿ ಕೇರಳಕ್ಕೆ ಎರಡು ಟ್ರಕ್ಗಳ ಮೂಲಕ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಪಡೆದುಕೊಂಡ ಕ್ಯಾಸಂಬಳ್ಳಿ ಪೊಲೀಸರು ಹಾಗೂ ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ ಎರಡೂ ಟ್ರಕ್ನಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಜಾನುವಾರುಗಳನ್ನು ರಕ್ಷಣೆ ಮಾಡಿದ್ದಾರೆ. ಎಂಟು ಮಂದಿಯನ್ನು ವಶಕ್ಕೆ ಪಡೆದಿರುವ ಕ್ಯಾಸಂಬಳ್ಳಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ರಾಮನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ 7 ಮಂದಿ ಬಾಂಗ್ಲಾ ಪ್ರಜೆಗಳ ಬಂಧನ.. ಮಹಿಳೆ ಪರಾರಿ