ಕರ್ನಾಟಕ

karnataka

ETV Bharat / state

ಜಿಲ್ಲಾ ಜಾಗೃತಿ ಸಭೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಂಸದ ಮುನಿಸ್ವಾಮಿ - ಸಂಸದ ಮುನಿಸ್ವಾಮಿ ಸುದ್ದಿ

ಕೋಲಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಂಸದ ಎಸ್. ಮುನಿಸ್ವಾಮಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆ ಹಮ್ಮಿಕೊಂಡಿದ್ದರು. ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಮುನಿಸ್ವಾಮಿ ತರಾಟೆಗೆ ತೆಗೆದುಕೊಂಡರು.

MP Muniswami meeting in Kolar
ಸಂಸದ ಮುನಿಸ್ವಾಮಿ ಸಭೆ

By

Published : Jan 18, 2020, 6:12 PM IST

ಕೋಲಾರ:ನಗರದಲ್ಲಿಂದು ಸಂಸದ ಎಸ್. ಮುನಿಸ್ವಾಮಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯನ್ನು ಹಮ್ಮಿಕೊಂಡಿದ್ದರು.

ಕೋಲಾರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ಇಲಾಖೆಗಳ ಅಧಿಕಾರಿಗಳನ್ನು ಮುನಿಸ್ವಾಮಿ ತರಾಟೆಗೆ ತೆಗೆದುಕೊಂಡರು.

ರಾಗಿ ಸೇರಿದಂತೆ ವಿವಿದ ಬೆಳೆಗಳಲ್ಲಿ ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರದಿಂದ ತಲುಪಬೇಕಾದ ಪ್ರೋತ್ಸಾಹ ಧನ ಹಾಗೂ ಅನುದಾನ ನ್ಯಾಯಯುತವಾಗಿ ತಲುಪುತ್ತಿಲ್ಲ ಎಂದು ಅಧಿಕಾರಿಗಳ ವಿರುದ್ಧ ಮುನಿಸ್ವಾಮಿ ಗರಂ ಆದರು. ಅಲ್ಲದೆ ಜಿಲ್ಲೆಯಾದ್ಯಂತ ಅಳವಡಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳು ಸಮರ್ಪಕವಾಗಿ ಕೆಲಸ ಮಾಡುತ್ತಿಲ್ಲ. ಕೆಲವೆಡೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅಳವಡಿಸದೆ ಅಧಿಕಾರಿಗಳು ಬೇಜವಾಬ್ದಾರಿತನ ತೋರಿಸುತ್ತಿದ್ದಾರೆ ಎಂದರು.

ಸಂಸದ ಮುನಿಸ್ವಾಮಿ ಸಭೆ

ರೈತರು, ಸಾರ್ವಜನಿಕರು ಹಾಗೂ ಗ್ರಾಮೀಣ ಭಾಗದ ಜನರಿಗೆ ಯಾವುದೇ ತೊಂದರೆಯಾಗದಂದೆ ಅಧಿಕಾರಿಗಳು ಕೆಲಸ ಮಾಡಬೇಕೆಂದು ಎಚ್ಚರಿಕೆ ನೀಡಿದರು.

ಸಭೆಯಲ್ಲಿ ಕೋಲಾರ ಶಾಸಕ ಕೆ. ಶ್ರೀನಿವಾಸಗೌಡ, ಜಿಲ್ಲಾ ಪಂಚಾಯಿತಿ ಅದ್ಯಕ್ಷ ಸಿ.ವೆಂಕಟೇಶ್, ಜಿಲ್ಲಾಧಿಕಾರಿ ಜೆ. ಮಂಜುನಾಥ್ ಸೇರಿದಂತೆ ದಿಶಾ ಸದಸ್ಯರು ಹಾಗೂ ಅಧಿಕಾರಿಗಳು ಹಾಜರಿದ್ದರು.

ABOUT THE AUTHOR

...view details