ಕೋಲಾರ: ಹೃದಯಸ್ತಂಭನದಿಂದ ನಿಧನರಾದ ಸ್ಯಾಂಡಲ್ವುಡ್ ನಟ ಪುನೀತ್ ರಾಜ್‌ಕುಮಾರ್ ಅವರಿಗೆ 'ಪದ್ಮಶ್ರೀ' ಪ್ರಶಸ್ತಿ ನೀಡಬೇಕೆಂದು ಸಂಸದ ಎಸ್.ಮುನಿಸ್ವಾಮಿ ಒತ್ತಾಯಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಮಕ್ಕಳಿಗೆ ಪಿಸಿಐ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪುನೀತ್ ಅವರು ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರೆ. ಅತ್ಯಂತ ಕಡಿಮೆ ಅವಧಿಯಲ್ಲಿ ಪುನೀತ್ ಅನಾಥಾಶ್ರಮ, ವೃದ್ಧಾಶ್ರಮ, ಶಿಕ್ಷಣ ಹಾಗೂ ಗೋ ಶಾಲೆ ತೆರೆದು ತಮ್ಮದೇ ಆದ ಸೇವೆ ಮಾಡಿದ್ದಾರೆ. ದೊಡ್ಮನೆಯಲ್ಲಿ ಹುಟ್ಟಿದರೂ ಸರಳತೆಯಿಂದ ಜೀವನ ನಡೆಸಿ ಯುವಜನತೆಗೆ ಮಾದರಿಯಾಗಿದ್ದಾರೆ. ಸರ್ಕಾರ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿರು.
ಸಿದ್ದರಾಮಯ್ಯಗೆ ಟಾಂಗ್:
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ದಲಿತರ ಬಗ್ಗೆ ನೀಡಿರುವ ಹೇಳಿಕೆ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಸಂಸದ ಎಸ್.ಮುನಿಸ್ವಾಮಿ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರು ಜೆಡಿಎಸ್ ತೊರೆದು ಕಾಂಗ್ರೆಸ್ಗೆ ಹೋಗಿದ್ದು, ಹೊಟ್ಟೆಪಾಡಿಗಾ ಅಥವಾ ಅಧಿಕಾರ ದಾಹಕ್ಕಾ ಎಂದು ಪ್ರಶ್ನಿಸಿದ್ದಾರೆ.
ಸಿದ್ದರಾಮಯ್ಯನವರು ದಲಿತರನ್ನು ಮೆಟ್ಟಿಲುಗಳಂತೆ ಉಪಯೋಗಿಸಿಕೊಂಡು ಸಿಎಂ ಆದವರು. ಅಹಿಂದ ಕಟ್ಟಿದ್ದಾಗ ನಾವು ನಿಮ್ಮ ಹಿಂದೆ ಇದ್ದೇವು, ನಿಮ್ಮ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಾಥ್ ನೀಡಿದ್ದೇವೆ. ಜೆಡಿಎಸ್‌ನಲ್ಲಿ ಕುಮಾರಸ್ವಾಮಿಯಿಂದ ಅಧಿಕಾರ ಸಿಗಲ್ಲ ಅನ್ನೋ ಕಾರಣಕ್ಕೆ ಕಾಂಗ್ರೇಸ್‌ಗೆ ಬಂದಿರಿ. ಪುನರ್ಜನ್ಮ ಕೊಟ್ಟ ಕಾಂಗ್ರೆಸ್ನಲ್ಲಿ ಹಿರಿಯ ದಲಿತ ಮುಖಂಡರನ್ನು ತುಳಿದು ಸಿಎಂ ಆಗಿದ್ದರು. ದಲಿತರು ಸಿಎಂ ಆಗುವುದನ್ನು ತಪ್ಪಿಸಿದ್ದರು. ಹಿರಿಯ ನಾಯಕರಾಗಿ ದಲಿತರ ಬಗ್ಗೆ ಹಗುರವಾಗಿ ಮಾತನಾಡಬೇಡಿ, ಮುಂದಿನ ಚುನಾವಣೆಯಲ್ಲಿ ನಾವೇನೆಂದು ತೋರಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಇದನ್ನೂ ಓದಿ: 'ಗೊರೆಹಬ್ಬ' ಸಂಭ್ರಮದ ನಡುವೆ ಪುನೀತ್ ಅಗಲಿಕೆಗೆ ಅಭಿಮಾನಿಗಳ ಕಣ್ಣೀರು