ಕೋಲಾರ:ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆ ದಿನೇ ದಿನೆ ಹೆಚ್ಚುತ್ತಿದ್ದು, ಮಾಜಿ ರಾಷ್ಟ್ರೀಯ ಕಬಡ್ಡಿ ಆಟಗಾರನೋರ್ವ ಸೋಂಕಿಗೆ ಬಲಿಯಾಗಿದ್ದಾರೆ.
ಜಿಲ್ಲೆಯ ಮಾಲೂರು ತಾಲೂಕಿನ ಕಪ್ಪೂರು ಗ್ರಾಮದ ಗೋಪಾಲ್ (39) ಮೃತ ಮಾಜಿ ರಾಷ್ಟ್ರೀಯ ಕಬಡ್ಡಿ ಆಟಗಾರ. ಇವರಿಗೆ ಕಳೆದ 15 ದಿನಗಳ ಹಿಂದೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಕೂಡಲೇ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು.