ಕರ್ನಾಟಕ

karnataka

ಒಕ್ಕಲಿಗ ಸಮುದಾಯಕ್ಕೆ ಶೇ 8ರಷ್ಟು ಮೀಸಲಾತಿ ಹೆಚ್ಚಳಕ್ಕೆ ನಿರ್ಮಲಾನಂದ ಸ್ವಾಮೀಜಿ ಆಗ್ರಹ

By

Published : Oct 17, 2022, 5:22 PM IST

ಒಕ್ಕಲಿಗ ಸಮುದಾಯಕ್ಕೆ ಶೇ 8 ರಷ್ಟು ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

nirmalananda-swamiji-demands-increase-in-reservation-for-okkaliga-community
Etv ಒಕ್ಕಲಿಗ ಸಮುದಾಯಕ್ಕೆ ಶೇ.8ರಷ್ಟು ಮೀಸಲಾತಿ ಹೆಚ್ಚಳಕ್ಕೆ ನಿರ್ಮಲಾನಂದ ಸ್ವಾಮೀಜಿ ಆಗ್ರಹ

ಕೋಲಾರ : ಒಕ್ಕಲಿಗ ಸಮುದಾಯಕ್ಕೆ ಶೇ 4ರಷ್ಟು ಮೀಸಲಾತಿ ಸಾಕಾಗುವುದಿಲ್ಲ. ಇದರೊಂದಿಗೆ ಶೇ 8ರಷ್ಟು ಮೀಸಲಾತಿ ಹೆಚ್ಚಳ ಮಾಡಬೇಕೆಂದು ಆದಿಚುಂಚನಗಿರಿ ಸಂಸ್ಥಾನದ ಪೀಠಾಧಿಪತಿ ನಿರ್ಮಲಾನಂದ ಸ್ವಾಮೀಜಿ ಆಗ್ರಹಿಸಿದ್ದಾರೆ.

ನಗರದಲ್ಲಿಂದು ಒಕ್ಕಲಿಗರ ಸಮುದಾಯದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸಾಂಸ್ಕೃತಿಕ ಭವನದ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಕ್ಕಲಿಗರ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಿದರು. ಎಸ್ಟಿ ಮೀಸಲಾತಿ ಕೊಟ್ಟ ಬೆನ್ನಲ್ಲೇ, ಇದೀಗ ಒಕ್ಕಲಿಗ ಸಮುದಾಯಕ್ಕೂ ಮೀಸಲಾತಿ ನೀಡಬೇಕೆಂದು ಆಗ್ರಹಿಸಿದರು. ಒಕ್ಕಲಿಗ ಸಮುದಾಯಕ್ಕೆ ಒಟ್ಟು 12% ಮೀಸಲಾತಿ ನೀಡುವಂತೆ ಸ್ವಾಮೀಜಿಗಳು ಒತ್ತಾಯಿಸಿದರು.

ಒಕ್ಕಲಿಗ ಸಮುದಾಯಕ್ಕೆ ಶೇ 8ರಷ್ಟು ಮೀಸಲಾತಿ ಹೆಚ್ಚಳಕ್ಕೆ ನಿರ್ಮಲಾನಂದ ಸ್ವಾಮೀಜಿ ಆಗ್ರಹ

ನಮಗೆ 4% ಮೀಸಲಾತಿ ಸಾಕುಗುವುದಿಲ್ಲ ಎಂಬ ಕೂಗು ಹಿಂದಿನಿಂದಲೂ ಇದೆ. ಆದರೆ ಸಂವಿಧಾನಕ್ಕೆ ವ್ಯತಿರಿಕ್ತವಾಗಿ ಮಾತನಾಡುವುದು ಬೇಡ ಎಂದು ಸುಮ್ಮನಿದ್ದೆವು. ಅಲ್ಲದೆ ಸಂವಿಧಾನದ ಚೌಕಟ್ಟಿನಲ್ಲಿ ಸರ್ಕಾರ ಮೀಸಲಾತಿ ಹೆಚ್ಚಿಸುವುದಾದರೆ ನಮಗೂ ಶೇ 8ರಷ್ಟು ಮೀಸಲಾತಿಯನ್ನು ಹೆಚ್ಚಿಸಬೇಕು ಎಂದು ಆಗ್ರಹಿಸಿದರು. ಜೊತೆಗೆ ಕಾನೂನು ಸಮ್ಮತವಾಗಿ ನಮ್ಮ ಬೇಡಿಕೆ ಈಡೇರದಿದ್ದರೆ, ಹಂತ ಹಂತವಾಗಿ ಹೋರಾಟದ ರೂಪುರೇಷೆಗಳನ್ನು ಕೈಗೊಳ್ಳುವುದಾಗಿ ನಿರ್ಮಲಾನಂದ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ರವಾನಿಸಿದರು.

ಇದನ್ನೂ ಓದಿ :ಒಕ್ಕಲಿಗರ ಮೀಸಲು ಹೆಚ್ಚಳ ಕುರಿತ ಅಪೇಕ್ಷೆಗಳಿಗೆ ನ್ಯಾಯಬದ್ಧವಾಗಿ ಕ್ರಮ: ಸಚಿವ ಅಶ್ವತ್ಥ್ ನಾರಾಯಣ್

ABOUT THE AUTHOR

...view details