ಕೋಲಾರ:ಜಿಲ್ಲೆಯ ಮಾಲೂರು ತಾಲೂಕಿನ ಓಬಟ್ಟಿ ಜಂಗಾಲಹಳ್ಳಿ ಗ್ರಾಮದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಾರದೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಕೋಲಾರ: ಗಣಿಗಾರಿಕೆಗೆ ಅನುಮತಿ ನೀಡಬಾರದೆಂದು ಗ್ರಾಮಸ್ಥರ ಮನವಿ - Koala's Latest News
ಮಾಲೂರು ತಾಲೂಕಿನ ಓಬಟ್ಟಿ ಜಂಗಾಲಹಳ್ಳಿ ಗ್ರಾಮದಲ್ಲಿ ಗಣಿಗಾರಿಕೆಗೆ ಅನುಮತಿ ನೀಡಬಾರದೆಂದು ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಕೋಲಾರ: ಗಣಿಗಾರಿಕೆಗೆ ಅನುಮತಿ ನೀಡಬಾರದೆಂದು ಗ್ರಾಮಸ್ಥರ ಮನವಿ
ಸ್ಥಳ ಪರಿಶೀಲನೆಗೆ ಭೇಟಿ ನೀಡಿದ್ದ ಉಪವಿಭಾಗಾಧಿಕಾರಿ ಸೋಮಶೇಖರ್ಗೆ ಮನವಿ ಮಾಡಿದ ಗ್ರಾಮಸ್ಥರು, ಓಬಟ್ಟಿ ಗಂಗಾಲಹಳ್ಳಿ ಗ್ರಾಮದ ಸರ್ವೆ ನಂಬರ್ 7ರಲ್ಲಿ 72 ಎಕರೆ ಗೋಮಾಳ ಜಮೀನಿದೆ. ಈ ಪೈಕಿ ಸುಮಾರು 50 ಎಕರೆಯಷ್ಟು ಜಮೀನು ಪರಿಶಿಷ್ಟ ವರ್ಗದ ಜನರಿಗೆ ಮಂಜೂರಾಗಿದ್ದು, ಉಳಿದ ಜಮೀನನ್ನು ಗ್ರಾಮದ ಜಾನುವಾರುಗಳನ್ನು ಮೇಯಿಸಲು ಮೀಸಲಿಟ್ಟಿದೆ.
ಹೀಗಾಗಿ ಯಾವುದೇ ಕಾರಣಕ್ಕೂ ಈ ಗ್ರಾಮದ ಬಳಿ ಗಣಿಗಾರಿಕೆಗೆ ಅವಕಾಶ ನೀಡಬಾರದೆಂದು ಗ್ರಾಮಸ್ಥರು ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.