ಕೋಲಾರ:ಮಾಜಿ ಸಚಿವ ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.
ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ: ಮತ್ತೊಬ್ಬ ಪ್ರಮುಖ ಆರೋಪಿ ಬಂಧನ - Varthoor Prakash
21:11 January 24
ವರ್ತೂರು ಪ್ರಕಾಶ್ ಕಿಡ್ನಾಪ್ ಪ್ರಕರಣ
ಪ್ರಕರಣದ ಎ1 ಆರೋಪಿ ಕವಿರಾಜ್ ಎಂಬಾತನ ಬಂಧನದ ವೇಳೆ, ತಮಿಳುನಾಡಿನ ಹೊಸೂರಿನ ಬಳಿ ಮತ್ತೊಬ್ಬ ಆರೋಪಿ ಪೊಲೀಸರಿಂದ ತಪ್ಪಿಸಿಕೊಂಡಿದ್ದ. ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೊದಲಿಗೆ ರೋಹಿತ್ ಎಂಬಾತನನ್ನು ಬಂಧಿಸಿದ್ದರು. ನಂತರ ಎ1 ಆರೋಪಿ ಕವಿರಾಜ್ನ ಹುಡುಕುವ ವೇಳೆ, ಆತನ ಅಡ್ರೆಸ್ ತೋರಿಸುವುದಾಗಿ ಕರೆದುಕೊಂಡು ಹೋದ ಆರೋಪಿ ರೋಹಿತ್ ಪೊಲೀಸರಿಂದ ಎಸ್ಕೇಪ್ ಆಗಿದ್ದ.
ಓದಿ:ದಚ್ಚು ಫಾರ್ಮಹೌಸ್ಗೆ ಭೇಟಿ ನೀಡಿದ ಕೃಷಿ ಸಚಿವ ಬಿ.ಸಿ. ಪಾಟೀಲ
ನಂತರ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಬೆಂಗಳೂರಿನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ. ನವೆಂಬರ್ 26 ರಂದು ಕೋಲಾರ ಬೆಗ್ಲಿಹೊಸಹಳ್ಳಿ ತೋಟದ ಮನೆಯ ಬಳಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಿಡ್ನಾಪ್ ಮಾಡಲಾಗಿತ್ತು. ಇದಾದ ನಂತರ ಡಿಸೆಂಬರ್ 3 ರಂದು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಸಂಬಂಧ ಆರು ಜನ ಆರೋಪಿಗಳನ್ನು ಸಿಬ್ಬಂದಿ ಬಂಧಿಸಿದ್ದರು.