ಕೋಲಾರ:ತಾಲೂಕು ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ನೇತೃತ್ವದಲ್ಲಿ ಕೇಂದ್ರ ಹಾಗೂ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಪಿಂಚಣಿ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕೇಂದ್ರ, ರಾಜ್ಯ ಸರ್ಕಾರಿ ನಿವೃತ್ತ ನೌಕರರಿಗೆ ಪಿಂಚಣಿ ಅದಾಲತ್ - ರಾಜ್ಯ ನಿವೃತ್ತ ಸರ್ಕಾರಿ ನೌಕರರು
ಕೇಂದ್ರ ಹಾಗೂ ರಾಜ್ಯ ನಿವೃತ್ತ ಸರ್ಕಾರಿ ನೌಕರರಿಗೆ ಇದೇ ಮೊದಲ ಬಾರಿಗೆ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನ ತಾಲೂಕು ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಜೆ. ಮಂಜುನಾಥ್ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಪಿಂಚಣಿ ಪಡೆಯಲು ವೃದ್ಧರು, ವಿಧವೆಯರು, ವಿಕಲಚೇತನರು ಬ್ಯಾಂಕ್, ಅಂಚೆ ಕಚೇರಿಗಳಿಗೆ ಪಿಂಚಣಿಗಾಗಿ ಅಲೆಯುವುದಲ್ಲದೆ, ನಾನಾ ರೀತಿಯ ಕಸರತ್ತು ಮಾಡಬೇಕಾಗಿತ್ತು. ಸಾಕಷ್ಟು ಯೋಜನೆಗಳು ಸರಿಯಾಗಿ ಸರಿಯಾದ ಫಲಾನುಭವಿಗಳಿಗೆ ತಲುಪುತ್ತಿಲ್ಲ ಅನ್ನೋ ಆರೋಪಗಳು ಕೇಳಿ ಬರುತ್ತಿವೆ. ಇದರಿಂದ ಎಚ್ಚೆತ್ತುಕೊಂಡ ಜಿಲ್ಲಾಡಳಿತ, ಇದೇ ಮೊದಲ ಬಾರಿಗೆ ನಿವೃತ್ತ ಸರ್ಕಾರಿ ನೌಕರರಿಗೆ ಪಿಂಚಣಿ ಅದಲಾತ್ ಕಾರ್ಯಕ್ರಮ ಹಮ್ಮಿಕೊಂಡಿತ್ತು.
ನೂರಾರು ಜನ ಫಲಾನುಭವಿಗಳು ಪಿಂಚಣಿ ಅದಾಲತ್ನಲ್ಲಿ ಭಾಗವಹಿಸಿ ಪಿಂಚಣಿ ಪಡೆಯಲು ತಮಗಾಗುತ್ತಿರುವ ಸಮಸ್ಯೆಗಳನ್ನ ಹೇಳಿಕೊಂಡ್ರು. ಜೊತೆಗೆ ಬ್ಯಾಂಕ್ಗಳಲ್ಲಿ ಪಿಂಚಣಿ ಪಡೆಯಲು ಎದುರಿಸುತ್ತಿರುವ ಸಮಸ್ಯೆಗಳನ್ನ ಬ್ಯಾಂಕ್ ಅಧಿಕಾರಿಗಳ ಎದುರು ಹೇಳಿಕೊಂಡ್ರು. ಇದೆ ವೇಳೆ ನಿವೃತ್ತ ನೌಕರರಿಗೆ ಯಾವುದೇ ತೊಂದರೆಯಾಗದಂತೆ ಬ್ಯಾಂಕ್ಗಳು ಪಿಂಚಣಿ ನೀಡಬೇಕು, ನೌಕರರನ್ನ ಸರಿಯಾಗಿ ನಡೆಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ರು.