ಬಂಗಾರಪೇಟೆ( ಕೋಲಾರ):ಮೃತ ವ್ಯಕ್ತಿಯೊಬ್ಬರಲ್ಲಿ ಕೊರೊನಾ ಪಾಸಿಟಿವ್ ಕಂಡು ಬಂದಿರುವ ಹಿನ್ನೆಲೆ, ಅಂತ್ಯ ಸಂಸ್ಕಾರಕ್ಕೆ ತೆರಳುವ ಮಾರ್ಗ ಮಧ್ಯ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಕಳೆದ ರಾತ್ರಿ ಕೋಲಾರದ ಬಂಗಾರಪೇಟೆ ಸಮೀಪ ನಡೆದಿದೆ.
ಬಂಗಾರಪೇಟೆ: ಮೃತದೇಹ ಕೊಂಡೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ - ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ
ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯೊಬ್ಬರಿಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದ್ದು, ಶವವನ್ನು ಅತ್ಯಸಂಸ್ಕಾರಕ್ಕೆ ಎಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಿಡಿಗೇಡಿಗಳು ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಕೋಲಾರ ಜಿಲ್ಲೆ ಬಂಗಾರಪೇಟೆ ಪಟ್ಟಣದ ಕುಂಬಾರಪಾಳ್ಯ, ಗಂಗಮನಪಾಳ್ಯ ಬಳಿ ಈ ಘಟನೆ ಜರುಗಿದೆ. ಕೋಲಾರದ ಖಾಸಗಿ ಅಸ್ಪತ್ರೆಯಲ್ಲಿ 45 ವರ್ಷದ ವ್ಯಕ್ತಿ ಉಸಿರಾಟದ ತೊಂದರೆಯಿಂದ ಮೃತಪಟ್ಟಿದ್ದರು. ನಂತರ ಕೋವಿಡ್ ಪರೀಕ್ಷೆಯಲ್ಲಿ ಅವರಿಗೆ ಪಾಸಿಟಿವ್ ಎಂದು ವರದಿ ಬಂದಿತ್ತು. ನಂತರ ವ್ಯಕ್ತಿಯ ಶವವನ್ನು ಅಂತ್ಯ ಸಂಸ್ಕಾರ ಮಾಡಲು ಬಂಗಾರಪೇಟೆಗೆ ಆ್ಯಂಬುಲೆನ್ಸ್ ಮೂಲಕ ಕೊಂಡೊಯ್ಯುವ ವೇಳೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಅಂತ್ಯಸಂಸ್ಕಾರಕ್ಕೆ ತೆರಳುವ ಮಾರ್ಗ ಮಧ್ಯದಲ್ಲಿ ಆ್ಯಂಬುಲೆನ್ಸ್ಗೆ ಅಡ್ಡಗಟ್ಟಿ, ಶವ ಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಜೊತೆಗೆ ಆ್ಯಂಬುಲೆನ್ಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.
ಇನ್ನು ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾದ ಕಾರಣ ಪೊಲೀಸರು ಮಧ್ಯ ಪ್ರವೇಶಿಸಿ, ಪರಿಸ್ಥಿತಿಯನ್ನ ನಿಯಂತ್ರಣಕ್ಕೆ ತಂದಿದ್ದಾರೆ. ಡಿವೈಎಸ್ಪಿ ಉಮೇಶ್ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.