ಕೋಲಾರ: ಬೆಳಗಾವಿಯ ಗೋರಕ್ಷಕ ಶಿವು ಉಪ್ಪಾರ್ ಹತ್ಯೆ ಪ್ರಕರಣವನ್ನು ಸಿಬಿಐಗೆ ಒಪ್ಪಿಸಬೇಕೆಂದು ಆಗ್ರಹಿಸಿ ಶ್ರೀರಾಮಸೇನೆ ಸಂಘಟನೆಯ ಕಾರ್ಯಕರ್ತರು ಕೋಲಾರದಲ್ಲಿಂದು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು.
ಶಿವು ಉಪ್ಪಾರ್ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಆಗ್ರಹ
ಗೋ ರಕ್ಷಕ ಶಿವು ಉಪ್ಪಾರ್ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಕೊಲಾರದಲ್ಲಿ ಶ್ರೀರಾಮಸೇನೆಯಿಂದ ಪ್ರತಿಭಟನೆ ನಡೆಸಲಾಯಿತು. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಮುಂದಾಗುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಕೋಲಾರದಲ್ಲಿ ಪ್ರತಿಭಟನೆ
ಕೋಲಾರ ನಗರದ ಪಲ್ಲವಿ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನೆ ಕಾರ್ಯಕರ್ತರು, ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ್ರು. ಅಲ್ಲದೇ ಶಿವು ಉಪ್ಪಾರ್ ಅವರನ್ನು ಕಿಡಿಗೇಡಿಗಳು ಹತ್ಯೆ ಮಾಡಿದ್ದು, ಇದು ಆಕಸ್ಮಿಕವಲ್ಲ. ಇದೊಂದು ವ್ಯವಸ್ಥಿತ ಹತ್ಯೆ. ಗೋ ಪ್ರೇಮಿಗಳನ್ನು ಹತ್ತಿಕ್ಕುವ ಕಾರ್ಯ ಸರ್ಕಾರದಿಂದ ನಡೆಯುತ್ತಿದೆ ಎಂದು ದೂರಿದರು.