ಕೋಲಾರ: ಪ್ರತಿಭಟನಾನಿರತ ಸಾರಿಗೆ ನೌಕರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವ ಘಟನೆ ಕೋಲಾರದಲ್ಲಿ ಜರುಗಿದೆ. ಕೋಲಾರದ ಗ್ರಾಮಾಂತರ ಪೊಲೀಸ್ ಠಾಣಾ ಎದುರು ಪ್ರತಿಭಟನಾನಿರತ ಸಾರಿಗೆ ನೌಕರರ ಮೇಲೆ ಲಾಠಿಚಾರ್ಜ್ ಮಾಡಲಾಗಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ಕೋಲಾರ ಹೊರವಲಯದ ಸಂಗೊಂಡಹಳ್ಳಿ ಬಳಿ ಜೈಲ್ ಭರೋ ಚಳವಳಿಯನ್ನು ನಡೆಸುತ್ತಿದ್ದರು. ಈ ವೇಳೆ ಗ್ರಾಮಾಂತರ ಠಾಣಾ ಪೊಲೀಸರು ಸಾರಿಗೆ ನೌಕರರನ್ನು ಬಂಧಿಸಿ ಪೊಲೀಸ್ ಠಾಣೆಗೆ ಕರೆದೊಯ್ದರು. ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜೈಲ್ ಭರೋ ಚಳವಳಿಯನ್ನು ನಡೆಸುತ್ತಿದ್ದ ಸಾರಿಗೆ ನೌಕರರನ್ನು ವಿನಾ ಕಾರಣ ಪೊಲೀಸರು ಬಂಧಿಸಿದ್ದಾರೆಂದು ಆರೋಪಿಸಿ, ನೌಕರರು ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ರು.