ಕೋಲಾರ :ಮಾಲೂರು ತಾಲೂಕಿನ ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಜಿಲೆಟಿನ್ ಕಡ್ಡಿಗಳನ್ನು ಪೊಲೀಸ್ ಬಂದೋಬಸ್ತ್ನಲ್ಲಿ ನಾಶಪಡಿಸಿದರು.
ನ್ಯಾಯಾಲಯದ ಅನುಮತಿ ಪಡೆದು ಜಿಲೆಟಿನ್ ಕಡ್ಡಿ ಸ್ಫೋಟಿಸಿದ ಪೊಲೀಸರು - ಜಿಲೆಟಿನ್ ಕಡ್ಡಿ ಸ್ಪೋಟಿಸಿದ ಪೊಲೀಸರು
ಕೋಲಾರದ ಅನಿಮಿಟ್ಟನಹಳ್ಳಿ ಬಳಿ ಇರುವ ವೆಂಕಟೇಶ್ವರ ಸ್ಟೋನ್ ಕ್ರಶರ್ನಲ್ಲಿ ನ್ಯಾಯಾಲಯದ ಅನುಮತಿ ಪಡೆದು ಪೊಲೀಸ್ ಬಂದೋಬಸ್ತ್ನಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸ್ಫೋಟಿಸಲಾಗಿದೆ.
ಕೋಲಾರ ಜಿಲ್ಲಾ ಪಂಚಾಯತ್ ಸದಸ್ಯೆ ಗೀತಾ ಅವರ ಪತಿ ವೆಂಕಟೇಶ್ಗೌಡ ಒಡೆತನದ ವೆಂಕಟೇಶ್ವರ ಸ್ಟೋನ್ ಕ್ರಶರ್ನಲ್ಲಿ ಅಕ್ರಮವಾಗಿ ಸ್ಫೋಟಕ ಬಳಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಬಂಡೆಗಳಲ್ಲಿ ಸುಮಾರು 70 ರಂಧ್ರಗಳನ್ನು ಕೊರೆದು ಅದರಲ್ಲಿ ಜಿಲೆಟಿನ್ ಹಾಗೂ ಮೋನಿಯನ್ ತುಂಬಿ ಸ್ಫೋಟ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿತ್ತು.
ಇದೀಗ ಅನಿಮಿಟ್ಟನಹಳ್ಳಿ ಬಳಿ ಇರುವ ವೆಂಕಟೇಶ್ವರ ಸ್ಟೋನ್ ಕ್ರಶರ್ನಲ್ಲಿ ನ್ಯಾಯಾಲಯದ ಅನುಮತಿ ಪಡೆದು ಪೊಲೀಸ್ ಬಂದೋಬಸ್ತ್ನಲ್ಲಿ ಜಿಲೆಟಿನ್ ಕಡ್ಡಿಗಳನ್ನು ಸ್ಪೋಟಿಸಲಾಗಿದೆ. ಅಕ್ರಮವಾಗಿ ತಮಿಳುನಾಡಿನಿಂದ ಜಿಲೆಟಿನ್ ಕಡ್ಡಿಗಳನ್ನು ತಂದು ಸ್ಫೋಟಿಸಲಾಗುತ್ತಿತ್ತು. ದಾಳಿ ನಂತರ ಕ್ರಶರ್ ಮಾಲೀಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.