ಕೋಲಾರ: ಖಾಕಿ ಬಟ್ಟೆ ಧರಿಸಿ ಪೊಲೀಸ್ ಎಂದು ವಸೂಲಿಗಿಳಿದು ದರೋಡೆ ಮಾಡುತ್ತಿದ್ದ ಯುವಕನನ್ನ ಕೋಲಾರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.
ಪೊಲೀಸ್ ವೇಷ ಧರಿಸಿ ವಸೂಲಿ ಮಾಡುತ್ತಿದ್ದ ವ್ಯಕ್ತಿ ಪೊಲೀಸ್ ವಶಕ್ಕೆ ನಗರದ ಸುತ್ತಮುತ್ತ ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ವಾಹನಗಳನ್ನ ಅಡ್ಡಗಟ್ಟಿ ವಸೂಲಿ ಮಾಡುತ್ತಿದ್ದ ಎನ್ನಲಾಗಿದೆ. ಕೋಲಾರ ತಾಲೂಕಿನ ಚೆಲುವನಹಳ್ಳಿಯ ವಿನಯ್ ಎಂಬಾತನೆ ಬಂಧಿತ ಆರೋಪಿ.
ರಾತ್ರಿ ವೇಳೆ ಹೆದ್ದಾರಿಯಲ್ಲಿ ಪೊಲೀಸ್ ವೇಷ ಧರಿಸಿ ವಸೂಲಿ ಮಾಡುತ್ತಿದ್ದ, ರಾತ್ರಿ ಗಸ್ತಿನಲ್ಲಿದ್ದ ಕೋಲಾರ ಗ್ರಾಮಾಂತರ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ಆರೋಪಿಯನ್ನು ಪೊಲೀಸರು ವಿಚಾರಣೆ ನಡೆಸಿದಾಗ ತಾನು ಮಾಡುತ್ತಿದ್ದ ಕೃತ್ಯ ಬೆಳಕಿಗೆ ಬಂದಿದೆ.
ಕೋಲಾರ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.