ಕರ್ನಾಟಕ

karnataka

ಕೋಲಾರ: ಪ್ರತಿಭಟನಾನಿರತ ಸಾರಿಗೆ ನೌಕರರ ಕುಟುಂಬಸ್ಥರನ್ನು ವಶಕ್ಕೆ ಪಡೆದ ಪೊಲೀಸರು

By

Published : Apr 15, 2021, 1:34 PM IST

ಕೋಲಾರದ ಕೆಎಸ್ಆರ್​ಟಿಸಿ ಬಸ್ ಡಿಪೋ ಮುಂದೆ ಮಹಿಳೆಯರು ಸೇರಿದಂತೆ ಸಾರಿಗೆ ನೌಕರರ ಕುಟುಂಬಸ್ಥರು ಮುಂಜಾನೆಯಿಂದಲೇ ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ನೌಕರರ ಕುಟುಂಬಸ್ಥರು ಡಿಪೋ ಒಳಗೆ ಪ್ರವೇಶಿಸಲು ಮುಂದಾದಾಗ ಪೊಲೀಸರು ತಡೆದಿದ್ದು, ಸುಮಾರು 30ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆದರು.

ಸಾರಿಗೆ ನೌಕರರ ಕುಟುಂಬಸ್ಥರನ್ನ ವಶಕ್ಕೆ ಪಡೆದ ಪೊಲೀಸ್​
ಸಾರಿಗೆ ನೌಕರರ ಕುಟುಂಬಸ್ಥರನ್ನ ವಶಕ್ಕೆ ಪಡೆದ ಪೊಲೀಸ್​

ಕೋಲಾರ: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕೆಎಸ್ಆರ್​ಟಿಸಿ ಡಿಪೋ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಸಾರಿಗೆ ನೌಕರರ ಕುಟುಂಬಸ್ಥರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ನಡೆದಿದೆ.

ಸಾರಿಗೆ ನೌಕರರ ಕುಟುಂಬಸ್ಥರನ್ನ ವಶಕ್ಕೆ ಪಡೆದ ಪೊಲೀಸ್​

ಪ್ರತಿಭಟನೆ ವೇಳೆ ನೌಕರರ ಕುಟುಂಬಸ್ಥರು ಡಿಪೋ ಒಳಗೆ ಪ್ರವೇಶಿಸಲು ಮುಂದಾದಾಗ ಪೊಲೀಸರು ತಡೆದಿದ್ದು, ಪೊಲೀಸರು ಹಾಗೂ ನೌಕರರ ಕುಟುಂಬಸ್ಥರ ನಡುವೆ ಕೆಲ ಕಾಲ ಮಾತಿನ ಚಕಮಕಿ ‌ನಡೆಯಿತು.

ಸರಿಯಾದ ವೇತನ ಇಲ್ಲದೆ ಮಕ್ಕಳ ಶಿಕ್ಷಣ ಸೇರಿದಂತೆ ಜೀವನ ನಿರ್ವಹಣೆ ಮಾಡಲು ಸಾಧ್ಯವಾಗುತ್ತಿಲ್ಲ. ನಮ್ಮ ಕುಟುಂಬಗಳು ಬೀದಿಗೆ ಬೀಳುವ ಪರಿಸ್ಥಿತಿ ಎದುರಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಗಲ್ ಪೇಟೆ ಪೊಲೀಸರು 30ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದರು.

ABOUT THE AUTHOR

...view details