ಕೋಲಾರ :ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋಲಾರ ಕ್ಷೇತ್ರಕ್ಕೆ ಬಂದು ಹೋದ ಬಳಿಕ ಇದೇ ಕೋಲಾರ ಕ್ಷೇತ್ರಕ್ಕೆ ಕಾಂಗ್ರೆಸ್ ಆಕಾಂಕ್ಷಿ ಅಭ್ಯರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಈ ಮೂಲಕ ಕೋಲಾರ ಕ್ಷೇತ್ರದಲ್ಲಿ ರಾಜಕೀಯ ಬೆಳವಣಿಗೆಗಳು ಗರಿಗೆದರಿವೆ.
ಸಿದ್ದರಾಮಯ್ಯ ಕೋಲಾರ ಪ್ರವಾಸದ ಬಳಿಕ ರಾಜಕೀಯ ಕ್ಷಿಪ್ರ ಬೆಳವಣಿಗೆ ಆರಂಭವಾಗುವ ಮೂಲಕ ಎಲ್ಲರ ಚಿತ್ತ ಸಿದ್ದರಾಮಯ್ಯ ನಿರ್ಧಾರದತ್ತ ಮೂಡಿದೆ. ಕೋಲಾರ ಕ್ಷೇತ್ರಕ್ಕೆ ಈಗಾಗಲೇ 4 ಅರ್ಜಿಗಳನ್ನು ಸಲ್ಲಿಸಿರುವ ಅಭ್ಯರ್ಥಿ ಆಕಾಂಕ್ಷಿಗಳು, ಸಿದ್ದರಾಮಯ್ಯ ಕ್ಷೇತ್ರಕ್ಕೆ ಡಿಮ್ಯಾಂಡ್ ಹೆಚ್ಚಾಗಿದೆ.
ಕೋಲಾರ ಕ್ಷೇತ್ರಕ್ಕೆ ಈಗಾಗಲೇ ಕಾಂಗ್ರೆಸ್ ಹಿರಿಯ ಮುಖಂಡ ಸುದರ್ಶನ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ, ಡಿ ಕೆ ಶಿವಕುಮಾರ್ ಕೃಪಕಟಾಕ್ಷೆ ಇರುವ ಮಾಲೂರು ಮೂಲಕ ಬೆಂಗಳೂರಿನ ಉದ್ಯಮಿ ಶ್ರೀನಿವಾಸ್, ಮಾಜಿ ಪರಿಷತ್ ಸದಸ್ಯ ಮನೋಹರ್ ಅರ್ಜಿ ಸಲ್ಲಿಸಿದ್ದಾರೆ.