ಕೋಲಾರ :ಖಾಸಗಿ ಬಸ್ಗಳು ಅಗತ್ಯಕ್ಕಿಂತ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ತುಂಬಿಕೊಂಡು ಸಂಚರಿಸುತ್ತಿವೆ. ಅದರಲ್ಲೂ ಹೆಚ್ಚಾಗಿ ಕಾಲೇಜು ವಿದ್ಯಾರ್ಥಿಗಳು ನೇತಾಡಿಕೊಂಡು ಹೋಗುತ್ತಿದ್ದ ದೃಶ್ಯ ಇಲ್ಲಿ ಸಾಮಾನ್ಯವಾಗಿ ಕಂಡು ಬರ್ತಿವೆ.
ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಸೋಮಯಾಜಲಹಳ್ಳಿ ಮಾರ್ಗದಿಂದ ಕಾಲೇಜಿಗೆ ತೆರಳಲು ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆ ಇದೆ. ಹಾಗೊಂದು ಹೀಗೊಂದು ಬರುವ ಖಾಸಗಿ ಬಸ್ಗಳಲ್ಲಿ ವಿದ್ಯಾರ್ಥಿಗಳು ಬಸ್ನಲ್ಲಿ ಜಾಗ ಸಿಗದೆ ಟಾಪ್ ಮೇಲೆ ಹಾಗೂ ಬಸ್ ಹಿಂಬದಿ ನೇತಾಡಿಕೊಂಡು ಪ್ರಯಾಣಿಸುತ್ತಾರೆ.