ಕೋಲಾರ: ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರ ಬರಬೇಕೆಂದು ಆಗ್ರಹಿಸಿ ಇಂದು ಖಾಸಗಿ ಶಾಲಾ ಶಿಕ್ಷಕರ ಸಂಘದ ಸದಸ್ಯರು ಪ್ರತಿಭಟನೆ ನಡೆಸಿದರು.
ಸರ್ಕಾರದ ನೆರವಿಗೆ ಆಗ್ರಹಿಸಿ ಖಾಸಗಿ ಶಾಲಾ ಶಿಕ್ಷಕರ ಪ್ರತಿಭಟನೆ - Kolar latest news
ಕೊರೊನಾ ಸಂಬಂಧ ಸಂಕಷ್ಟದಲ್ಲಿರುವ ಖಾಸಗಿ ಶಿಕ್ಷಕರ ನೆರವಿಗೆ ಸರ್ಕಾರ ಬರಬೇಕೆಂದು ಆಗ್ರಹಿಸಿ ಶಾಲಾ ಶಿಕ್ಷಕರ ಸಂಘ ಪ್ರತಿಭಟನೆ ನಡೆಸಿತು.
Kolar
ನಗರದ ಡಿಡಿಪಿಐ ಕಚೇರಿ ಬಳಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರ ಖಾಸಗಿ ಶಾಲಾ ಶಿಕ್ಷಕರಿಗೆ ಪ್ಯಾಕೇಜ್ ಘೋಷಣೆ ಮಾಡಿ ಮೂರು ತಿಂಗಳ ವೇತನ ನೀಡುವ ಮೂಲಕ ಅವರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜೆಡಿಎಸ್ ಮುಖಂಡ ರಮೇಶ್ ಬಾಬು ಉಪಸ್ಥಿತರಿದ್ದು, ಸರ್ಕಾರ ಖಾಸಗಿ ಶಾಲಾ ಶಿಕ್ಷಕರ ನೆರವಿಗೆ ಬರಬೇಕೆಂದು ಮನವಿ ಮಾಡಿದರು.