ಕರ್ನಾಟಕ

karnataka

ETV Bharat / state

ಕ್ರಷರ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ: ಏಳು ಜನರನ್ನು ವಶಕ್ಕೆ ಪಡೆದ ಪೊಲೀಸರು - construction of crusher

ಹೊಸ ಕ್ರಷರ್ ನಿರ್ಮಾಣದಿಂದ ಮನೆಗಳಿಗೆ ಹಾಗೂ ರೈತರು ಬೆಳೆಯುವ ಬೆಳೆಗಳಿಗೆ ಹಾನಿಯುಂಟಾಗುತ್ತದೆ ಎಂದು ಕ್ರಷರ್ ನಿರ್ಮಾಣಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ, ಬಂದ ಪೊಲೀಸರು ಏಳು ಜನರನ್ನು ವಶಕ್ಕೆ ಪಡೆದಿದ್ದಾರೆ.

Protest against construction of crusher at kolar
ಕ್ರಷರ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ

By

Published : Oct 10, 2022, 6:57 PM IST

ಕೋಲಾರ:ಕ್ರಷರ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಗ್ರಾಮಸ್ಥರನ್ನ, ಪೊಲೀಸರು ಲಾಟಿ ಬೀಸಿ ಚದುರಿಸಿರುವಂತಹ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬಂಡಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ಸಂಬಂಧ ಏಳು ಜನ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಕ್ರಷರ್ ನಿರ್ಮಾಣ ವಿರೋಧಿಸಿ ಪ್ರತಿಭಟನೆ

ಗ್ರಾಮಕ್ಕೆ ಹೊಂದಿಕೊಂಡಂತೆ ಗ್ರಾಮದ ಬಳಿ ಹೊಸ ಕ್ರಷರ್ ನಿರ್ಮಾಣ ಮಾಡಲಾಗುತ್ತಿದೆ.‌ ಇದರಿಂದ ಮನೆಗಳಿಗೆ ಹಾಗೂ ರೈತರು ಬೆಳೆಯುವ ಬೆಳೆಗಳಿಗೆ ಹಾನಿಯುಂಟಾಗುತ್ತದೆ ಎಂದು ಕ್ರಷರ್ ನಿರ್ಮಾಣಕ್ಕೆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದರು. ಅಲ್ಲದೇ ಈ ಕುರಿತು ಸಂಬಂಧಪಟ್ಟ ಇಲಾಖೆಯವರಿಗೂ ಸಹ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗದ ಹಿನ್ನೆಲೆ ಗ್ರಾಮಸ್ಥರೆಲ್ಲ ಕ್ರಷರ್ ನಿರ್ಮಾಣ ಮಾಡುವ ಜಾಗದಲ್ಲಿ ಪ್ರತಿಭಟನೆ ಮಾಡಿದ್ರು.

ಈ ವೇಳೆ ಸ್ಥಳಕ್ಕೆ ಆಗಮಿಸಿದ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಪ್ರತಿಭಟನೆಯನ್ನ ಕೈಬಿಡುವಂತೆ ಸೂಚನೆ ನೀಡಿದ್ರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು. ಪೊಲೀಸರು ಲಾಠಿ ಬೀಸಿ ಗುಂಪನ್ನ ಚದುರಿಸಿದ್ರು. ಅಲ್ಲದೇ ಕೆಲ ಗ್ರಾಮಸ್ಥರ ಮೇಲೆ ಲಾಠಿ ಚಾರ್ಜ್ ಸಹ ಮಾಡಲಾಗಿದೆ ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಏಳು ಜನರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ:ಕಾಂಗ್ರೆಸ್​ ಶಾಸಕ ಪ್ರಾಣ ಬೆದರಿಕೆ ಹಾಕಿರುವುದಾಗಿ ಆರೋಪಿಸಿ ಎಸ್ಪಿಗೆ ದೂರು ನೀಡಿದ ಸಮಾಜ ಸೇವಕ..

ABOUT THE AUTHOR

...view details