ಕರ್ನಾಟಕ

karnataka

ನೀರಿನ ಸಮಸ್ಯೆ: ಬಿಂದಿಗೆ ಹಿಡಿದು ಬೀದಿಗಿಳಿದ ಮಹಿಳೆಯರು

ಕುಡಿಯುವ ನೀರಿಗೆ ಒತ್ತಾಯಿಸಿ ಮಹಿಳೆಯರು ಬಿಂದಿಗೆ ಹಿಡಿದು ಪಂಚಾಯ್ತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಕೋಲಾರದಲ್ಲಿ ನಡೆದಿದೆ.

By

Published : Oct 19, 2019, 11:13 AM IST

Published : Oct 19, 2019, 11:13 AM IST

ನೀರಿನ ಸಮಸ್ಯೆ

ಕೋಲಾರ:ಕುಡಿಯುವ ನೀರಿಗೆ ಒತ್ತಾಯಿಸಿ ಮಹಿಳೆಯರು ಸೇರಿದಂತೆ ನಾಲ್ಕೈದು ಗ್ರಾಮಗಳ ಗ್ರಾಮಸ್ಥರು ಪಂಚಾಯ್ತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿ ಘಟನೆ ಕೋಲಾರದಲ್ಲಿ ಜರುಗಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಆಲಂಗೂರು ಪಂಚಾಯ್ತಿಗೆ ಮುತ್ತಿಗೆ ಹಾಕಿರುವ ಗ್ರಾಮಸ್ಥರು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ರು. ಇದೇ ವೇಳೆ ಗ್ರಾಮಪಂಚಾಯ್ತಿ ಕಛೇರಿಗೆ ಬೀಗ ಜಡಿಯಲಾಯ್ತು. ಕಳೆದ ಎರಡು ತಿಂಗಳಿಂದ ಪಂಚಾಯ್ತಿ ಸುತ್ತಮುತ್ತಲಿನ ಗ್ರಾಮಗಳಲ್ಲಿ ನೀರಿನ ಸಮಸ್ಯೆ ಎದುರಾಗಿದ್ದು, ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ನಿರ್ಲಕ್ಷ್ಯವಹಿಸುತ್ತಿದ್ದಾರೆಂದು ಆರೋಪಿಸಿದ್ರು.

ನೀರಿನ ಸಮಸ್ಯೆ, ಗ್ರಾಮಸ್ಥರ ಪ್ರತಿಭಟನೆ

ಆಲಂಗೂರು ಪಂಚಾಯ್ತಿ ವ್ಯಾಪ್ತಿಗೆ ಸೇರಿದ ಮಣ್ಣೆನಹಳ್ಳಿ, ಭಟ್ರಹಳ್ಳಿ, ಆಲಂಗುರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಸ್ಥರು ಖಾಲಿ ಬಿಂದಿಗೆಗಳೊಂದಿಗೆ ಪ್ರತಿಭಟನೆ ನಡೆಸಿದ್ದು, ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಒಂದು ವಾರದೊಳಗೆ ನೀರಿನ ಸಮಸ್ಯೆ ಬಗೆಹರಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ ನಂತರ ಗ್ರಾಮಸ್ಥರು ಪ್ರತಿಭಟನೆ ಕೈಬಿಟ್ಟರು.

ABOUT THE AUTHOR

...view details