ಕೋಲಾರ: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಸೇರಿದಂತೆ ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರ ಸಂಘದ ವತಿಯಿಂದ ಪ್ರತಿಭಟನೆ ಮಾಡಲಾಯಿತು.
ಕಳೆದ ಹತ್ತು ದಿನಗಳಿಂದ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಇದುವರೆಗೂ ಜಿಲ್ಲಾಡಳಿತವಾಗಲಿ, ಸರ್ಕಾರವಾಗಲಿ ಗಣನೆಗೆ ತೆಗೆದುಕೊಳ್ಳುತ್ತಿಲ್ಲ ಎಂದು ನೌಕರರು ಆರೋಪಿಸಿದರು. ಅಲ್ಲದೆ ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಕೆಲಸದಿಂದ ವಜಾ ಮಾಡಲಾಗುವುದೆಂದು ನೋಟಿಸ್ ನೀಡಿರುವುದು, ಕಷ್ಟಕಾಲದಲ್ಲಿ ಕೊರೊನಾ ವಾರಿಯರ್ಸ್ ಗೆ ತೀರ್ವ ಆಘಾತ ಉಂಟಾಗಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡರು.