ಕರ್ನಾಟಕ

karnataka

By

Published : Jan 8, 2020, 10:46 AM IST

ETV Bharat / state

ಭಾರತ್​​ ಬಂದ್​: ಕೋಲಾರದಲ್ಲಿ ರಸ್ತೆ ತಡೆಗೆ ಮುಂದಾದ ಪ್ರತಿಭಟನಾಕಾರರ ಬಂಧನ

ಕಾರ್ಮಿಕ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್​ ಬಂದ್​​ಗೆ ಕೋಲಾರದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ಪ್ರತಿಭಟನೆಯ ಬಿಸಿ ಸಾರ್ವಜನಿಕರಿಗೆ ತಟ್ಟಿಲ್ಲ.

protest by various organisations in kolara
ಕೋಲಾರದಲ್ಲಿ ಪ್ರತಿಭಟನಾಕಾರರ ಬಂಧಿಸಿದ ಪೊಲೀಸರು..

ಕೋಲಾರ: ನಗರದ ಟೋಲ್ ಗೇಟ್ ಬಳಿ ಇರುವ ಡಿಪೋ ಮುಂದೆ ಬಸ್​​ಗಳನ್ನ ಹೊರ ಬಿಡದೆ ರಸ್ತೆ ತಡೆ ನಡೆಸಿ ಪ್ರತಿಭಟನೆಗೆ ಮುಂದಾದ ಹಿನ್ನೆಲೆಯಲ್ಲಿ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.

ವಿವಿಧ ಸಂಘಟನೆಗಳಿಂದ ಬಂದ್​​ಗೆ ಕರೆ... ಕೋಲಾರದಲ್ಲಿ ಮಿಶ್ರ ಪ್ರತಿಕ್ರಿಯೆ

ಬಸ್ ತಡೆ ನಡೆಸಬಾರದು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗೆ ತೊಂದರೆ ಮಾಡಬಾರದು ಎಂದು ಪ್ರತಿಭಟನಾಕಾರರಿಗೆ ನೋಟಿಸ್ ನೀಡಲಾಗಿತ್ತು. ಹೀಗಿದ್ದರೂ ಡಿಪೋ ಮುಂದೆ ಪ್ರತಿಭಟನೆಗೆ ಮುಂದಾಗಿ ಧಿಕ್ಕಾರ ಕೂಗಿದ ಹಿನ್ನೆಲೆ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಒಟ್ಟಾರೆ ಜಿಲ್ಲೆಯಲ್ಲಿ ಭಾರತ್ ಬಂದ್​ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದರೂ ಪ್ರತಿಭಟನೆಯ ಬಿಸಿ ಸಾರ್ವಜನಿಕರಿಗೆ ತಟ್ಟಿಲ್ಲ.

For All Latest Updates

TAGGED:

ABOUT THE AUTHOR

...view details