ಕೋಲಾರ:ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಐಟಿಸಿ ಕಂಪನಿ ಕಾರ್ಮಿಕರು ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದಾರೆ.
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಧರಣಿ: ಕಾರ್ಮಿಕ ಅಸ್ವಸ್ಥ - ಲೆಟೆಸ್ಟ್ ಕೋಲಾರ ಪ್ರತಿಭಟನೆ ನ್ಯೂಸ್
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಐಟಿಸಿ ಕಂಪನಿ ಕಾರ್ಮಿಕರು ಅನಿರ್ಧಿಷ್ಟಾವಧಿ ಧರಣಿ ನಡೆಸಿದ್ದು, ಕಾರ್ಮಿಕನೋರ್ವ ಅಸ್ವಸ್ಥನಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ವೇತನ ಹೆಚ್ಚಳಕ್ಕಾಗಿ ಕಾರ್ಮಿಕರಿಂದ ಪ್ರತಿಭಟನೆ : ಉಪವಾಸ ಸತ್ಯಾಗ್ರಹಕ್ಕೆ ಮುಂದಾದ ಕಾರ್ಮಿಕ ಅಸ್ವಸ್ತ
ಜಿಲ್ಲೆಯ ಮಾಲೂರಿನ ಹೊಸಕೋಟೆ ರಸ್ತೆಯಲ್ಲಿರುವ ಐಟಿಸಿ ಕಂಪನಿ ಎದುರು ಅನಿರ್ಧಿಷ್ಟಾವಧಿ ಧರಣಿ ನಡೆಸುತ್ತಿರುವ ಕಂಪನಿ ಕಾರ್ಮಿಕರು ವೇತನ ಹೆಚ್ಚಳಕ್ಕಾಗಿ ಆಗ್ರಹಿಸಿದರು. ಇಂದು ಮುಂಜಾನೆಯಿಂದ ಕಾರ್ಮಿಕರು ಉಪವಾಸ ಸತ್ಯಾಗ್ರಹ ಮಾಡಲು ಮುಂದಾಗಿದ್ದು, ಈ ವೇಳೆ ಕಾರ್ಮಿಕನೋರ್ವ ಅಸ್ವಸ್ಥನಾಗಿದ್ದಾನೆ. ಬಳಿಕ ಆತನನ್ನು ಸ್ಥಳೀಯ ಮಾಲೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.