ಕೋಲಾರ: ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಕೋಲಾರದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಎಸ್ಡಿಪಿಐ, ಪಿಎಫ್ಐ ನಿಷೇಧಿಸಿ; ಹಿಂದೂ ಜಾಗರಣ ವೇದಿಕೆ ಆಗ್ರಹ - kolar protest
ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಒತ್ತಾಯಿಸಿ ಕೋಲಾರದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆ
ಕೋಲಾರ ಹೊರವಲಯದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಶಾಸಕರ ಮನೆ ಹಾಗೂ ಕೆಲ ಹಿಂದೂಗಳ ಮನೆ ಮೇಲೆ ದಾಳಿ ನಡೆಸಿರುವ ಹಲ್ಲೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಅಲ್ಲದೆ ಹಿಂದೂಗಳ ಮೇಲೆ ದಾಳಿ ನಡೆಸಿರುವ ಎಸ್ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವಂತೆ ಆಗ್ರಹಿಸಿದರು. ಉತ್ತರ ಪ್ರದೇಶದ ಮಾದರಿಯಲ್ಲಿ ಗಲಭೆಯಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಸರ್ಕಾರಕ್ಕೆ ಮನವಿ ಮಾಡಿದರು.