ಕರ್ನಾಟಕ

karnataka

ETV Bharat / state

ಕೋಲಾರದಲ್ಲಿ ವಿವಿಧ ಸಂಘಟನೆಗಳಿಂದ ಹಲವು ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ - protest

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ರೈತ ಸಂಘ ಹಾಗೂ ಹಸಿರು ಸೇನೆ, ವಕೀಲರ ಸಂಘ ಮತ್ತು ಬಿಜೆಪಿ ಕಾರ್ಯಕರ್ತರು ವಿವಿಧ ಬೇಡಿಕೆಗಳನ್ನು ಪೂರೈಸುವಂತೆ ಹಲವೆಡೆ ಪ್ರತಿಭಟನೆ ನಡೆಸಿದರು.

protest

By

Published : Jul 9, 2019, 5:08 PM IST

Updated : Jul 9, 2019, 5:19 PM IST

ಕೋಲಾರ: ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದವರು ಕೋಲಾರದಲ್ಲಿ ಪ್ರತಿಭಟನೆ ನಡೆಸಿದ್ರು. ಇಂದು ಕೋಲಾರದ ಡಿಡಿಪಿಐ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರನ್ನ, ಪದವೀಧರ ಶಿಕ್ಷಕರು ಎಂದು ಪರಿಗಣಿಸಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ವೇತನ ಶ್ರೇಣಿ ನಿಗದಿಗೊಳಿಸಬೇಕೆಂದು ಒತ್ತಾಯಿಸಿದರು. ಅಲ್ಲದೆ ನೂತನ ಪಿಂಚಣಿ ಯೋಜನೆ ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಮುಂದುವರಿಸಬೇಕು, ಶಿಕ್ಷಕರ ವರ್ಗಾವಣೆ ಸೇರಿದಂತೆ ಪ್ರಾಥಮಿಕ ಶಾಲೆಗಳಲ್ಲಿ ಎಲ್.ಕೆ.ಜಿ ಹಾಗೂ ಯುಕೆಜಿ ಪ್ರಾರಂಭಿಸಬೇಕು ಎಂದು ಮನವಿ ಮಾಡಿದರು. ಪ್ರತಿಭಟನೆಯಲ್ಲಿ ನೂರಾರು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.

ವಿವಿಧ ಸಂಘಟನೆಗಳಿಂದ ಪ್ರತಿಭಟನೆ
ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಯಿಂದಾಗಿ ಬೇಸತ್ತು ಕೋಲಾರದಲ್ಲಿ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು. ಕೋಲಾರ ನಗರದ ಮೆಕ್ಕೆ ವೃತ್ತದಲ್ಲಿ ರಾಜಕಾರಣಿಗಳ ಪ್ರತಿಕೃತಿ ದಹಿಸಿ ಅಂತ್ಯ ಸಂಸ್ಕಾರದ ಅಣಕು ಮಾಡುವ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಅಧಿಕಾರದ ಆಸೆಯಿಂದ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿ ಕಚ್ಚಾಡುತ್ತಿರುವ ಶಾಸಕರ ಸದಸ್ಯತ್ವ ಕೊಡಲೇ ಅನರ್ಹಗೊಳಿಸಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. ರಸ್ತೆ ತಡೆಯಿಂದಾಗಿ ಕೆಲಕಾಲ ವಾಹನ ಸವಾರರು ಪರದಾಡಬೇಕಾಯಿತು.
Last Updated : Jul 9, 2019, 5:19 PM IST

ABOUT THE AUTHOR

...view details