ಕೋಲಾರ:ಜಿಲ್ಲಾಸ್ಪತ್ರೆಯಲ್ಲಿರುವ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲು ಮೀನಾಮೇಷ ಎಣಿಸುತ್ತಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಆಸ್ಪತ್ರೆ ಉದ್ಘಾಟನೆಗೆ ಜನಪ್ರತಿನಿಧಿಗಳ ಮೀನಾಮೇಷ ಖಂಡಿಸಿ ಪ್ರತಿಭಟನೆ! - ಕೋಲಾರ ಲೆಟೆಸ್ಟ್ ನ್ಯೂಸ್
ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟನೆ ಮಾಡಲು ಮೀನಾಮೇಷ ಎಣಿಸುತ್ತಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಧೋರಣೆಯನ್ನು ಖಂಡಿಸಿ ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಲಾಯಿತು.
ಎಸ್ಎನ್ಆರ್ ಆಸ್ಪತ್ರೆ ಎದುರು ಜನವಾದಿ ಮಹಿಳಾ ಸಂಘಟನೆಯು ಪ್ರತಿಭಟನೆ ನಡೆಸಿ ಧಿಕ್ಕಾರ ಕೂಗಿದ್ರು. ಸುಮಾರು 40 ಕೋಟಿ ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಾಣ ಮಾಡಿ 5 ತಿಂಗಳು ಕಳೆದರೂ ಸಹ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉದ್ಘಾಟನೆ ಮಾಡದೇ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಜಿಲ್ಲಾಸ್ಪತ್ರೆಯಲ್ಲಿ ಪ್ರತಿ ತಿಂಗಳಿಗೆ 250 ರಿಂದ 300 ರಷ್ಟು ಹೆರಿಗೆಗಳು ಆಗುತ್ತಿದ್ದು, ಈಗಿರುವಂತಹ ಆಸ್ಪತ್ರೆಯು ಸಾಕಾಗದೆ ಇರುವುದರಿಂದ ಕೂಡಲೇ ನೂತನವಾಗಿ ನಿರ್ಮಿಸಿರುವ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿ ಜನರ ಸೇವೆಗೆ ನೀಡಬೇಕು ಎಂದು ಒತ್ತಾಯಿಸಿದರು.